ಶಿವಮೊಗ್ಗ ದಸರಾ, ಕಾರ್ಯಕ್ರಮಗಳ ಬಗ್ಗೆ ಜನರಿಗೆ ಏನೇನೂ ಗೊತ್ತಿಲ್ಲ, ಕೆಲವರಿಗಷ್ಟೆ ಸೀಮಿತವಾಯ್ತಾ ಉತ್ಸವ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 OCTOBER 2023

SHIMOGA : ಪಾಲಿಕೆ ವತಿಯಿಂದ ಶಿವಮೊಗ್ಗದಲ್ಲಿ ‘ವೈಭವದ ದಸರಾ’ ಆಚರಣೆ ನಡೆಯುತ್ತಿದೆ. ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದರೆ ಈ ಬಾರಿಯೂ ದಸರಾ ಕಾರ್ಯಕ್ರಮಗಳು ಕೆಲವರಿಗಷ್ಟೆ ಸೀಮಿತವಾಗಿದೆ. ತಡವಾಗಿ ಕಾರ್ಯಕ್ರಮಗಳು ಶುರುವಾಗುತ್ತಿದ್ದು, ಅತಿಥಿಗಳೇ ಸಿಟ್ಟಾಗುವಂತಾಗಿದೆ.

ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗದಲ್ಲಿ ದಸರಾ ಆಚರಣೆ ನಡೆಸಲಾಗುತ್ತಿದೆ. ಕಾರ್ಯಕ್ರಮಗಳ ಆಯೋಜನೆಗೆ ಪಾಲಿಕೆ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿ ರಚಿಸಲಾಗಿದೆ.

ದಸರಾಗೆ ಗಜಪಡೆಗೆ ಆಹ್ವಾನ

ಜಂಬೂ ಸವಾರಿಯಲ್ಲಿ ಆನೆಗಳು ಪಾಲ್ಗೊಳ್ಳಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆ ಶಾಸಕ ಎಸ್‌.ಎನ್.ಚನ್ನಬಸಪ್ಪ, ಮೇಯರ್‌ ಶಿವಕುಮಾರ್‌ ನೇತೃತ್ವದಲ್ಲಿ ಪಾಲಿಕೆ ಸದಸ್ಯರು, ಅಧಿಕಾರಿಗಳ ತಂಡ ಸಕ್ರೆಬೈಲಿಗೆ ಭೇಟಿ ನೀಡಿತ್ತು. ದಸರಾಗೆ ಗಜಪಡೆಗೆ ಆಹ್ವಾನ ನೀಡಿತು. ಅಂಬಾರಿ ಹೊರಲಿರುವ ಸಾಗರ್‌ ಆನೆ, ಸಾಥ್‌ ನೀಡಲು ಆಗಮಿಸುತ್ತಿರುವ ಕುಮ್ಕಿ ಆನೆಗಳಾದ ನೇತ್ರಾವತಿ ಮತ್ತು ಹೇಮಾವತಿಗೆ ಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ- ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಕೆಲಸ ಶುರು, ಇಲ್ಲಿದೆ ಕಾಮಗಾರಿ ಕುರಿತ 4 ಪ್ರಮುಖಾಂಶ

ಉದ್ಘಾಟನೆಗು ಬಾರದ ಜನ

ಶಿವಮೊಗ್ಗ ದಸರಾಗೆ ಅ.15ರಂದು ಚಾಲನೆ ನೀಡಲಾಯಿತು. ಮಹಾನಗರ ಪಾಲಿಕೆ ಆವರಣದಿಂದ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ನಾಡದೇವಿ ಚಾಮುಂಡೇಶ್ವರಿಯ ಮೆರವಣಿಗೆ ನಡೆಯಿತು. ಜನಪ್ರತಿನಿಧಿಗಳು, ಅಧಿಕಾರಿಗಳು, ಕಲಾ ತಂಡ ಹೊರತು ಸಾರ್ವಜನಿಕರು ಮೆರವಣಿಗೆಯಲ್ಲಿ ಕಾಣಿಸಲಿಲ್ಲ. ದೇಗುಲದ ಆವರಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲೂ ಬೆರಳೆಣಿಕೆಯಷ್ಟು ಮಂದಿ ಭಾಗವಹಿಸಿದ್ದರು.

doddanna

ಕೆಲವರಿಗಷ್ಟೇ ಸೀಮಿತ ಈ ಬಾರಿ ದಸರಾ

ನಾಡಹಬ್ಬ ಹಿನ್ನೆಲೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕುವೆಂಪು ರಂಗಮಂದಿರ, ಡಾ. ಅಂಬೇಡ್ಕರ್‌ ಭವನ, ಪಾಲಿಕೆ ಆವರಣ ಸೇರಿದಂತೆ ವಿವಿಧೆಡೆ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದೆ. ಆದರೆ ಬಹುತೇಕ ಕಾರ್ಯಕ್ರಮಗಳಲ್ಲಿ ಖಾಲಿ ಚೇರುಗಳ ಕಾಣಿಸುತ್ತಿವೆ. ಕೆಲವೆ ಮಂದಿಗೆ ಕಾರ್ಯಕ್ರಮಗಳು ಸೀಮಿತವಾಗಿವೆ.

ಕಾಲೇಜು ವಿದ್ಯಾರ್ಥಿಗಳೆ ಆಸರೆ

ವಿವಿಧ ದಸರಾ ಕಾರ್ಯಕ್ರಮಗಳು, ಮೆರವಣಿಗೆಗೆ ಕಾಲೇಜು ವಿದ್ಯಾರ್ಥಿಗಳೇ ಆಸರೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಜನ ‘ಕಿಕ್ಕಿರಿದು ಸೇರಿದ್ದರು’ ಎಂದು ಬಿಂಬಿಸಲು ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದೆ. ಆಸಕ್ತಿ ಇರದಿದ್ದರು ವಿದ್ಯಾರ್ಥಿಗಳು ಅನಿವಾರ್ಯವಾಗಿ ಕಾರ್ಯಕ್ರಮಗಳಲ್ಲಿ ಭಾಗಹಿಸುವಂತೆ ಮಾಡಲಾಗುತ್ತಿದೆ.

ಇದನ್ನೂ ಓದಿ- ಸಕ್ರೆಬೈಲು ಬಿಡಾರದ ಆನೆ ಬಾಲ ಕಟ್‌, ಹರಿತ ಆಯುಧದಿಂದ ದಾಳಿ ಶಂಕೆ, ಕಾರಣವೇನು?

ಸಿಡಿಮಿಡಿಗೊಂಡ ನಟ ದೊಡ್ಡಣ್ಣ

ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ರಂಗ ದಸರಾ ಕಾರ್ಯಕ್ರಮ ನಿಗದಿತ ಸಮಯಕ್ಕೆ ಆರಂಭವಾಗದ್ದಕ್ಕೆ ಅತಿಥಿಯಾಗಿದ್ದ ನಟ ದೊಡ್ಡಣ್ಣ ಸಿಟ್ಟಾದರು. ಬಹು ಹೊತ್ತು ಕಾದರೂ ಕಾರ್ಯಕ್ರಮದಲ್ಲಿ ಜನರು ಇಲ್ಲದೆ, ಉಳಿದ ಗಣ್ಯರು ಬಾರದೆ ಇದ್ದಿದ್ದಕ್ಕೆ ಸಿಡಿಮಿಡಿಗೊಂಡರು. ಶಾಸಕರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಶಾಸಕ ಚನ್ನಬಸಪ್ಪ ಅವರು ಸಕ್ರೆಬೈಲಿಗೆ ತೆರಳಿದ್ದರಿಂದ ತಡವಾಗಿ ಆಗಮಿಸಿದರು. ಬಳಿಕ ನಟ ದೊಡ್ಡಣ್ಣ ಅವರಿಗೆ ಪರಿಸ್ಥಿತಿ ತಿಳಿಸಿದರು.

ಜನರ ತೆರಿಗೆ ದೊಡ್ಡಲ್ಲಿ ನಡೆಯುತ್ತಿರುವ ಶಿವಮೊಗ್ಗ ದಸರಾ ಕಾರ್ಯಕ್ರಮಗಳ ಬಗ್ಗೆ ಜನರಿಗೇ ಮಾಹಿತಿ ಇಲ್ಲವಾಗಿದೆ. ಜನ ಭಾಗವಹಿಸುವ ಸಮಯ ಹೊರತು ಉಳಿದ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂಬ ಆರೋಪವು ಇದೆ. ಪ್ರತಿ ವರ್ಷ ಜನರಿಲ್ಲದೆ ದಸರಾ ಆಚರಣೆ ಮಾಡುವ ಅಗತ್ಯವೇನು ಎಂಬ ಪ್ರಶ್ನೆಯು ಉದ್ಭವವಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment