ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020
ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆ. ಆದರೆ ಇದು ಲಾಕ್‍ಡೌನ್ ಸಡಿಲಿಕೆಯಲ್ಲ. ಹಾಗಾಗಿ ಜನರು ಅನಗತ್ಯವಾಗಿ ಮನೆಯಿಂದ ಹೊರ ಬರಬಾರದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಕೆಲವು ಅಭಿವೃದ್ಧಿ ಕಾಮಗಾರಿ ಮತ್ತು ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಿದೆ. ಖರೀದಿ ಕ್ಷೇತ್ರವನ್ನು ವಿಸ್ತರಿಸಿದೆ. ಇದನ್ನೇ ಲಾಕ್ಡೌನ್ ಸಡಿಲಿಕೆ ಎಂದು ಭಾವಿಸಿ ಜನರು ರಸ್ತೆಗಿಳಿಯುತ್ತಿದ್ದಾರೆ. ಅನವಶ್ಯಕವಾಗಿ ರಸ್ತೆಗಿಳಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುನ್ನೆಚ್ಚರಿಕೆ ಕ್ರಮ ಕಡ್ಡಾಯ
ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಶಿವಮೊಗ್ಗ ಹಸಿರು ವಲಯದಲ್ಲಿ ಇದೆ. ಲಾಕ್‍ಡೌನ್ ಆರಂಭದಿಂದಲೂ ಅಗತ್ಯ ವಸ್ತುಗಳ ಖರೀದಿಗೆ ಇಲ್ಲಿ ಅವಕಾಶವಿತ್ತು. ಈಗ ಸರ್ಕಾರವೇ ಖರೀದಿ ವಲಯವನ್ನು ವಿಸ್ತರಣೆ ಮಾಡಿದೆ. ಆದರೆ ಖರೀದಿ ಅವಶ್ಯಕತೆ ಇದ್ದರೆ ಮಾತ್ರವೆ ಜನರು ಹೊರಬರಬೇಕು. ಇನ್ನು, ರಸ್ತೆಗಿಳಿಯುವವರು ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಮಾಸ್ಕ್, ಕೈಗೆ ಗ್ಲೌಸ್ ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















