
ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020
ಕರೋನ ಹಿನ್ನೆಲೆ ವಿಧಿಸಲಾಗಿರುವ ಲಾಕ್ಡೌನ್ನಲ್ಲಿ ಯಾವುದೇ ಸಡಿಲಿಕೆ ಮಾಡಿಲ್ಲ ಆದರೆ ಕೆಲವು ಚಟುವಟಿಕೆಗಳನ್ನು ನಡೆಸಲು ಹೆಚ್ಚುವರಿಯಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಪಪಡಿಸಿದರು.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ನಿನ್ನೆಯಿಂದ ಹೆಚ್ಚುವರಿಯಾಗಿ ಕೆಲವು ಸೇವೆಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ ಎಂದರು
ಯಾವೆಲ್ಲ ಅಂಗಡಿ ತೆರೆಯಬಹುದು?
ಜ್ಯೂಸ್, ಐಸ್ಕ್ರೀಂ ಅಂಗಡಿ, ಮೊಬೈಲ್ ರಿಚಾರ್ಜ್ ಅಂಗಡಿಗಳು, ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು, ಎಲೆಕ್ಟ್ರಿಕಲ್ ರಿಪೇರಿ, ಕೃಷಿ ಸಂಬಂಧಿತ ಮೆಕ್ಯಾನಿಕ್ ಅಂಗಡಿಗಳು, ಪ್ಲಂಬರ್ನಂತಹ ಸ್ವಯಂ ಉದ್ಯೋಗ ಕೈಗೊಂಡಿರುವವರು ಅಂಗಡಿ ತೆರೆಯಬಹುದಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಅಂತರ ಕಡ್ಡಾಯ
ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಇದಕ್ಕಾಗಿ ಪ್ರತ್ಯೇಕ ಪಾಸ್ ಪಡೆಯುವ ಅಗತ್ಯವಿಲ್ಲ. ಆದರೆ ಎಲ್ಲಾ ಸಂದರ್ಭಗಳಲ್ಲಿ ಸಾಮಾಜಿಕ ಅಂತರವನ್ನು ಪಾಲನೆ ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ವಾಹನ ಸವಾರರಿಗೆ ಎಚ್ಚರಿಕೆ
ಗಾಂಧಿ ಬಜಾರ್ನಲ್ಲಿ ಅನುಮತಿ ನೀಡಲಾಗಿರುವ ಅಂಗಡಿಗಳನ್ನು ಸೋಮವಾರದಿಂದ ತೆರೆಯಲು ಅವಕಾಶ ನೀಡಲಾಗುವುದು. ದ್ವಿಚಕ್ರ ವಾಹನದಲ್ಲಿ ಒಬ್ಬರು ಹಾಗೂ ನಾಲ್ಕು ಚಕ್ರ ವಾಹನಗಳಲ್ಲಿ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶವಿದೆ. ಈ ಕುರಿತು ಈಗಾಗಲೇ ಹಲವು ಬಾರಿ ಎಚ್ಚರಿಕೆ ನೀಡಲಾಗಿದ್ದು, ಇನ್ನು ಮುಂದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]