ಶಿವಮೊಗ್ಗ ನಗರದಲ್ಲಿ ಈ 3 ದಿನ ಲಾಡ್ಜ್ ರೂಂ ಪಡೆಯಲು ಜಿಲ್ಲಾಧಿಕಾರಿ ಪರ್ಮಿಷನ್ ಬೇಕು, ಕಾರಣವೇನು?

SHIVAMOGGA LIVE NEWS | 26 FEBRURARY 2023

SHIMOGA : ವಿಮಾನ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ಜಿಲ್ಲಾಡಳಿತ ನಗರದ ಎಲ್ಲಾ ಲಾಡ್ಜ್ ಗಳನ್ನು ಬ್ಲಾಕ್ ಮಾಡಿದೆ. ಪ್ರವಾಸಿಗರು, ಸ್ಥಳೀಯರಾರಿಗೂ ರೂಮ್ ನೀಡದಂತೆ ಲಾಡ್ಜ್  (Lodges) ಮಾಲೀಕರಿಗೆ ಸೂಚನೆ ನೀಡಿದೆ.

Shivamogga-Live-Number-1-Website

Shimoga-DC-office-and-Mathur-Hotel-Lodge

ಫೆ.27ರಂದು ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮವಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಎಲ್ಲಾ ಲಾಡ್ಜ್, ಪ್ರವಾಸಿ ಮಂದಿರಗಳ ರೂಂಗಳನ್ನು ಬ್ಲಾಕ್ ಮಾಡಲಾಗಿದೆ.

ಲಾಡ್ಜ್ ಮಾಲೀಕರಿಗೆ ನೊಟೀಸ್

ಲಾಡ್ಜ್ (Lodges) ಮಾಲೀಕರಿಗೆ ಜಿಲ್ಲಾಡಳಿತ ನೊಟೀಸ್ ನೀಡಿದೆ. ತಮ್ಮ ಅನುಮತಿ ಇಲ್ಲದೆ ಯಾರಿಗೂ ರೂಂ ನೀಡಬಾರದು ಎಂದು ಸೂಚನೆ ನೀಡಿದೆ. ಫೆ.25, 26 ಮತ್ತು 27ರಂದು ಸಾರ್ವಜನಿಕರಿಗೆ ರೂಂ ನೀಡಬಾರದು. ರೂಂ ನೀಡಬೇಕಾದ ಅನಿವಾರ್ಯತೆ ಇದ್ದರೆ ಜಿಲ್ಲಾಡಳಿತದ ಅನುಮತಿ ಕಡ್ಡಾಯ ಎಂದು ತಿಳಿಸಿದೆ.

ಜಿಲ್ಲಾಡಳಿತದ ವತಿಯಿಂದ ಕಮಿಟಿ ರಚಿಸಲಾಗಿದೆ. ಅನಿವಾರ್ಯ ಸಂದರ್ಭ ಈ ಕಮಿಟಿಗೆ ಮಾಹಿತಿ ನೀಡಿ, ಲಾಡ್ಜ್ ಮಾಲೀಕರು ಗ್ರಾಹಕರಿಗೆ ರೂಂ ಒದಗಿಸಬಹುದಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ 50 ವರ್ಷದ ಹಿಂದೆಯೇ ವಿಮಾನ ಬರುತ್ತಿತ್ತು, ಎಲ್ಲಿ ಲ್ಯಾಂಡ್ ಆಗುತ್ತಿದ್ದವು ಗೊತ್ತಾ?

ರೂಂ ಕೊಡಬೇಡಿ ಅಂದಿದ್ದೇಕೆ?

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನೆಲೆ ಅಕ್ಕಪಕ್ಕದ ತಾಲೂಕು, ನೆರೆ ಜಿಲ್ಲೆಗಳಿಂದ ಪೊಲೀಸರು, ಭದ್ರತಾ ಸಿಬ್ಬಂದಿ, ವಿವಿಧ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ. ಅವರು ತಂಗಲು ಅನುಕೂಲವಾಗಲಿ ಎಂದು ಜಿಲ್ಲಾಡಳಿತ ರೂಂಗಳನ್ನು ಕಾಯ್ದಿರಿಸಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ನಗರದಲ್ಲಿ ಸುಮಾರು 30 ಲಾಡ್ಜ್ ಗಳಿವೆ. 1800 ರೂಂಗಳು ಇದರಲ್ಲಿವೆ.

ಇದನ್ನೂ ಓದಿ – ವಿಮಾನ ನಿಲ್ದಾಣದ ರನ್ ವೇ ಪಕ್ಕದಲ್ಲಿ ಶಕ್ತಿಶಾಲಿ ಆಂಜನೇಯ, ಕೊನೆತನಕ ಉಳಿದಿದ್ದ ಗುಡಿ ದಿಢೀರ್ ತೆರವಾಗಿದ್ದೇಕೆ?

JNNCE College Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 26, 2023

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

Leave a Comment