ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 20 ಮೇ 2020
ಕೋವಿಡ್ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎಸ್.ಪಿ ಕಚೇರಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಮೂರು ಮಂದಿ ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್‍ನಲ್ಲಿದ್ದಾರೆ. ಇನ್ನುಳಿದಂತೆ ಯಾವುದೇ ಪೊಲೀಸ್ ಅಧಿಕಾರಿಗಳು ಕ್ವಾರೆಂಟೈನ್‍ನಲ್ಲಿರುವುದಿಲ್ಲ. ಆದರೆ ಮುಂಜಾಗರೂಕತಾ ಕ್ರಮವಾಗಿ ಈಗಾಗಲೇ 11 ಮಂದಿ ಪೊಲೀಸ್ ಅಧಿಕಾರಿಗಳ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದರು.
ವಿಶೇಷ ಸಂದರ್ಭ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
ವಿಶೇಷ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಕರ್ತವ್ಯಕ್ಕಾಗಿ ಬೇರೆ ಜಿಲ್ಲೆಯ ಅಧಿಕಾರಿಗಳನ್ನು ನಿಯೋಜಿಸುವುದು ಸಾಮಾನ್ಯವಾಗಿದೆ. ಆದರೂ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಹೊರ ಜಿಲ್ಲೆಯ ಅಧಿಕಾರಿಗಳು ಹೆಚ್ವುವರಿ ಕರ್ತವ್ಯ ವಹಿಸಿಕೊಂಡಿಲ್ಲ. ಇನ್ನು ಜಿಲ್ಲಾ ರಕ್ಷಣಾಧಿಕಾರಿ ಅವರು ವರ್ಗಾವಣೆಯಾಗಿರುವ ವರದಿಯು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದರು.
ಎಲ್ಲಾ ಸರ್ಕಾರಿ ಕಚೇರಿಗಳನ್ನು ನಿಗದಿತ ಅವಧಿಯಲ್ಲಿ ಸಂಪೂರ್ಣ ಕ್ರಿಮಿನಾಶಕ ಸಿಂಪಡಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸ್ಪಷ್ಟನೆಗೆ ಕಾರಣವೇನು?
ಬೆಳಗ್ಗೆಯಿಂದ ಕೆಲವು ಮಾಧ್ಯಮಗಳಲ್ಲಿ ಜಿಲ್ಲಾ ರಕ್ಷಾಣಧಿಕಾರಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ವರದಿ ಪ್ರಕಟಿಸಲಾಗಿತ್ತು. ಇದರಿಂದ ಜನರು ಆತಂಕಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ ಅವರು ಯಾವುದೆ ಸರ್ಕಾರಿ ಕಚೇರಿಯನ್ನು ಸೀಲ್ ಡೌನ್ ಮಾಡಿಲ್ಲ ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]