ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2020
ವಾಹನ ದಟ್ಟಣೆ, ಜನ ಸಂಚಾರ ಹೆಚ್ಚಳವಾಗಿರುವ ಕುವೆಂಪು ರಸ್ತೆ ಇನ್ಮುಂದೆ ನೋ ವೆಂಡಿಂಗ್ ಜೋನ್ ಆಗುವ ಸಾದ್ಯತೆ ಇದೆ. ಈ ಸಂಬಂಧ ಮಹಾನಗರ ಪಾಲಿಕೆ ಮುಂದೆ ಪ್ರಸ್ತಾವನೆ ಇದ್ದು, ಮೊದಲ ಹಂತದಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆಸಲಾಯಿತು.
ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ಇವತ್ತು ಮಹಾನಗರ ಪಾಲಿಕೆ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆಸಲಾಯಿತು. ತರಕಾರಿ, ಹಣ್ಣು, ಹೂವು, ಜ್ಯೂಸ್ ಗಾಡಿಗಳು, ಫಾಸ್ಟ್ ಫುಡ್ ಮಾರಾಟಗಾರರನ್ನು ತೆರವು ಮಾಡಲಾಯಿತು. ಪೊಲೀಸ್ ಬಂದೋಬಸ್ತ್‍ನಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು.
VIDEO REPORT
ಮೊದಲೇ ಸೂಚನೆ ಕೊಟ್ಟಿದ್ದ ಪಾಲಿಕೆ
ಕುವೆಂಪು ರಸ್ತೆಯ ಫುಟ್‍ಪಾತ್ ಮತ್ತೆ ರಸ್ತೆ ಬದಿಯಲ್ಲಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ. ಇನ್ಮುಂದೆ ಈ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರ ಮಾಡುವಂತಿಲ್ಲ ಎಂದು ಮಹಾನಗರ ಪಾಲಿಕೆ ತಿಳಿಸಿತ್ತು. ವ್ಯಾಪಾರ ನಡೆಸದಂತೆ ಮಂಗಳವಾರ ಕೂಡ ಅಧಿಕಾರಿಗಳು ಸೂಚಿಸಿದ್ದರು. ಆದರೂ ಇವತ್ತು ಇಲ್ಲಿ ವ್ಯಾಪಾರ ನಡೆಯುತ್ತಿದ್ದರಿಂದ, ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ವ್ಯಾಪಾರಿಗಳನ್ನು ತೆರವುಗೊಳಿಸಿದರು.
ಇನ್ಮುಂದೆ ನೋ ವೆಂಡಿಂಗ್ ಜೋನ್
ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ, ಶಿವಮೊಗ್ಗದ ಕುವೆಂಪು ರಸ್ತೆ ಮತ್ತು ಸಾಗರ ರಸ್ತೆಯಲ್ಲಿ ನೋ ವೆಂಡಿಂಗ್ ಜೋನ್ ಘೋಷಣೆಗೆ ಪ್ರಸ್ತಾವನೆ ಇದೆ. ಎರಡು ಕಡೆ ವಾಹನ ದಟ್ಟಣೆ ಹೆಚ್ಚಾಗಿರುವ ಹಿನ್ನೆಲೆ ಫುಟ್ ಪಾಟ್ ಮತ್ತು ಬೀದಿ ಬದಿ ವ್ಯಾಪಾರ ನಡೆಸುವಂತಿಲ್ಲ ಎಂದು ತಿಳಿಸಿದರು.
ಕುವೆಂಪು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದೆ. ಬೀದಿ ಬದಿ ವ್ಯಾಪಾರಿಗಳಿಂದಾಗಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್‍ಗಳು, ಅಪಘಾತಗಳು ಸಂಭವಿಸುತ್ತಿವೆ ಎಂಬ ದೂರುಗಳಿವೆ. ಹಾಗಾಗಿ ಈ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರ ನಿರ್ಬಂಧಿಸಲಾಗಿದೆ. ಇತ್ತ ಜೈಲ್ ಸರ್ಕಲ್‍ನಿಂದ ನಂಜಪ್ಪ ಆಸ್ಪತ್ರೆ, ಜಿಲ್ಲಾ ಪಂಚಾಯಿತಿ ಮುಂಭಾಗ ಕುವೆಂಪು ರಸ್ತೆಯಲ್ಲಿ ನೋ ಪಾರ್ಕಿಂಗ್ ಕಡ್ಡಾಯವಾಗಿ ಪಾಲಿಸಬೇಕಾಗಿದೆ. ಉಲ್ಲಂಘಿಸಿದರೆ ವಾಹನಗಳಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422