ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | WATER | 2 ಜೂನ್ 2022
ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಮಾರ್ಟ್ ಸಿಟಿ ಯೋಜನೆ ಅಡಿ ಮೆಸ್ಕಾಂ ವತಿಯಿಂದ 11 ಕೆ.ವಿ ವಿದ್ಯುತ್ ಲೈನ್ ನಿರ್ವಹಣೆ ಮಾಡಲಾಗುತ್ತಿದೆ. ಆದ್ದರಿಂದ ಜೂನ್ 4ರಂದು ಬೆಳಗ್ಗ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡಲಾಗಿದೆ.
ವಿದ್ಯುತ್ ವ್ಯತ್ಯಯ ಹಿನ್ನೆಲೆಯಲ್ಲಿ ಜೂನ್ 4 ಮತ್ತು 5ರಂದು ಶಿವಮೊಗ್ಗದ ನಗರದಲ್ಲಿ ದೈನಂದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ನಗರದ ಕೆಲ ಬಡಾವಣೆಗಳಲ್ಲಿ ಜೂ.3ರಂದು ಬೆಳಗ್ಗೆಯಿಂದ ಕರೆಂಟ್ ಇರಲ್ಲ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422