ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2024
SHIMOGA : ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮವನ್ನು ಏ.28ರಂದು ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ ಶಶಿಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಕೇಂದ್ರ ಸರ್ಕಾರದ ಪ್ರಸಾರ ಸಚಿವಾಲಯದ ಮಾನ್ಯತೆ ಪಡೆದಿದೆ. ಇಂಟರ್ನ್ಯಾಷನಲ್ ಸ್ಟಾಂಡರ್ಡ್ ಬುಕ್ ನಂಬರ್ಸ್ನಲ್ಲಿ ನೋಂದಣಿಯಾಗಿದೆ. ವಿಶೇಷ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನೀಡಿದ ಪ್ರದರ್ಶನವನ್ನು ಚಿತ್ರೀಕರಿಸಿ ಬುಕ್ ಆಫ್ ರೆಕಾರ್ಡ್ಗೆ ಕಳುಹಿಸಲಾಗುವುದು ಎಂದರು.
ಕಾರ್ಯಕ್ರಮವನ್ನು ಏಷಿಯನ್ ಪ್ಯಾರಾ ಗೇಮ್ಸ್ ಪದಕ ವಿಜೇತ ಕಿಶನ್ ಗಂಗೊಳ್ಳಿ ಉದ್ಘಾಟಿಸಲಿದ್ದಾರೆ. ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯ ರಾಜ್ಯ ನಿರ್ದೇಶಕ ಡಾ.ಎಸ್. ಕೃಷ್ಣಮೂರ್ತಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೊದಲು ನೋಂದಣಿ ಮಾಡಿದ 20 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಏ.20 ನೋಂದಣಿಗೆ ಕೊನೆ ದಿನ. ಸ್ಪರ್ಧೆಯನ್ನು ಆಧರಿಸಿ ಪ್ರವೇಶ ಶುಲ್ಕ ನಿಗದಿಪಡಿಸಲಾಗುವುದು ಎಂದರು. ಹೆಚ್ಚಿನ ಮಾಹಿತಿಗೆ 9900933653 ಸಂಪರ್ಕಿಸಬಹುದು ಎಂದು ತಿಳಿಸಿದರು.
ಶರವಣ್, ಮೀನಾಕ್ಷಿ, ರಾಘವೇಂದ್ರ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ಮಹಿಳೆ ಹೊಟ್ಟೆಯಲ್ಲಿತ್ತು 9 ಕೆ.ಜಿ ತೂಕದ ಗೆಡ್ಡೆ, ಶಿವಮೊಗ್ಗ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






