
ಶಿವಮೊಗ್ಗ ಲೈವ್.ಕಾಂ | SHIMOGA | 14 ಏಪ್ರಿಲ್ 2020
ಶಿವಮೊಗ್ಗ ನಗರದಲ್ಲಿ ಇವತ್ತು ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನ ನಿಷೇಧಿಸಿ ಮಹಾನಗರ ಪಾಲಿಕೆ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಏಪ್ರಿಲ್ ೧೪ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಇವತ್ತು ಒಂದು ದಿನ ತಮ್ಮ ಉದ್ದಿಮೆಯನ್ನು ಬಂದ್ ಮಾಡಬೇಕು ಎಂದು ಮಾಂಸ ಮಾರಾಟದ ಅಂಗಡಿ ಮಾಲೀಕರಿಗೆ ಕಮಿಷನರ್ ಸೂಚಿಸಿದ್ದಾರೆ.
ಒಂದು ವೇಳೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡಿದರೆ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಮಿಷನರ್ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]