ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 27 SEPTEMBER 2024 : ಹೊಸ ಪಿಂಚಣಿ ನೀತಿ (NPS) ರದ್ದುಗೊಳಿಸಿ ಹಳೆ ಪಿಂಚಣಿ ನೀತಿ (ಒಪಿಎಸ್) ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎನ್ಪಿಎಸ್, ಯುಪಿಎಸ್ ಬೇಡ
ಎನ್ಪಿಎಸ್ ರದ್ದುಗೊಳಿಸುವಂತೆ ಹತ್ತು ವರ್ಷದಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ವ್ಯವಸ್ಥೆ (ಯುಪಿಎಸ್) ಜಾರಿಗೆ ತೀರ್ಮಾನಿಸಿದೆ. ಆದರೆ ಈ ವ್ಯವಸ್ಥೆ ಕೂಡ ಷೇರು ಮಾರುಕಟ್ಟೆ ಆಧಾರಿತವಾಗಿದೆ. ಇದರಿಂದ ಸಂಧ್ಯಾ ಕಾಲದಲ್ಲಿ ಸರ್ಕಾರಿ ನೌಕರರ ಬದುಕಿಗೆ ಭದ್ರತೆ ಇಲ್ಲವಾಗಲಿದೆ. ಇದೇ ಕಾರಣಕ್ಕೆ ಎನ್ಪಿಎಸ್, ಯುಪಿಎಸ್ ಬೇಡ, ಒಪಿಎಸ್ ಜಾರಿಗೊಳಿಸಿ ಎಂದು ಆಗ್ರಹಿಸಿ ಮನವಿ ಮಾಡಲಾಯಿತು.
ಜಿಲ್ಲಾಧ್ಯಕ್ಷ ರಾಘವೇಂದ್ರ.ಕೆ.ಎಸ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ರಾಜ್ಯ ಉಪಾಧ್ಯಕ್ಷ ಡಾ. ರಜನಿಕಾಂತ್, ರಾಜ್ಯ ಸಹ ಕಾರ್ಯದರ್ಶಿ ಚಂದ್ಯಾನಾಯ್ಕ, ಜಿಲ್ಲಾ ಕಾರ್ಯದರ್ಶಿ ಶಿವಶಂಕರ್, ಡಾ. ಪರಿಸರ ನಾಗರಾಜ್ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಸಿದ್ದರಾಮಯ್ಯ ಬೆಂಬಲಿಸಿ ಶಿವಮೊಗ್ಗದಲ್ಲಿ ಪ್ರತಿಜ್ಞೆ ಸ್ವೀಕಾರ