SHIVAMOGGA LIVE NEWS | SHIMOGA | 13 ಏಪ್ರಿಲ್ 2022
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ಬಂಧಿಸಬೇಕು ಎಂದು ಆಗ್ರಹಿಸಿ NSUI ಸಂಘಟನೆ ವತಿಯಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ NSUI ಕಾರ್ಯಕರ್ತರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಸುರಿಯುವ ಮಳೆಯನ್ನೂ ಲೆಕ್ಕಿಸದೆ NSUI ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರಾದ ಎನ್.ರಮೇಶ್, ದೀಪಕ್ ಸಿಂಗ್, NSUI ಸಂಘಟನೆ ಪ್ರಮುಖರಾದ ಚೇತನ್, ವಿಜಯ್ ಸೇರಿದಂತೆ ಹಲವರು ಇದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200