SHIVAMOGGA LIVE NEWS | 24 MARCH 2023
SHIMOGA : ತೀರ್ಥಹಳ್ಳಿಯ ಬಾಲಕಿ ನಂದಿತಾ ಅಸಹಜ ಸಾವು ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನಂದಿತಾ ಪ್ರಕರಣದ ತನಿಖೆಯನ್ನು (Case) ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಎನ್.ಎಸ್.ಯು.ಐ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
2013ರಲ್ಲಿ ತೀರ್ಥಹಳ್ಳಿಯ ಬಾಲಕಿ ನಂದಿತಾ ಅಸಹಜವಾಗಿ ಸಾವನ್ನಪ್ಪಿದ್ದಳು. ಆಗ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು (Case) ಸಿಒಡಿಗೆ ವಹಿಸಿತ್ತು. ಆದರೆ ಸಿಒಡಿ ನೀಡಿದ ವರದಿಗೆ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಿಬಿಐ ತನಿಖೆಗೆ ಒತ್ತಾಯಿಸಿದ್ದರು.
2018ರ ವಿಧಾನಸಭೆ ಚುನಾವಣೆ ಹೊತ್ತಿಗೆ ತೀರ್ಥಹಳ್ಳಿಗೆ ಬಂದಿದ್ದ ಅಮಿತ್ ಷಾ ಅವರು ನಂದಿತಾ ಮನೆಗೆ ಭೇಟಿ ನೀಡಿದ್ದರು. ಬಾಲಕಿಯ ಸಾವಿನ ಕುರಿತು ತನಿಖೆಯನ್ನು ಸಿಬಿಐಗೆ ವಹಿಸಿ, ತನಿಖೆ ನಡೆಸಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದರು. ಈಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೆ ಇದ್ದರೂ ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ. ನಂದಿತಾ ಪ್ರಕರಣವನ್ನು ಸಿಬಿಐಗೆ ವಹಿಸಿ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಎನ್.ಎಸ್.ಯು.ಐ ಕಾರ್ಯಕರ್ತರು ಒತ್ತಾಯಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್, ದೋಸಾ ತವಾ, ಸೀರೆ, ಬಟ್ಟೆ, ಇಡ್ಲಿ ಕುಕ್ಕರ್ ಸೀಜ್
ಪ್ರಮುಖರಾದ ರವಿ ಕಾಟಿಕರ್, ಚರಣ್, ಹರ್ಷಿತ್, ವಿಜಯ ಕುಮಾರ್, ಕುಮಾರ್, ಚಂದ್ರೋಜಿರಾಜ್, ಆಕಾಶ್, ಬಸವರಾಜು ಇದ್ದರು.