
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮೇ 2020
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿ ಕಿಟ್ ವಿತರಿಸಬೇಕು ಎಂದು ಒತ್ತಾಯಿಸಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ದೇಶಾದ್ಯಂತ ಲಾಕ್‌ಡೌನ್ ಹಿನ್ನೆಲೆ ಉದ್ಯೋಗವಿಲ್ಲದೆ ಬಡ, ಮಧ್ಯಮ ವರ್ಗದ ಜನರು ಸಂಕಷ್ಟದಲ್ಲಿದ್ದಾರೆ. ಮಕ್ಕಳನ್ನು ಶಾಲೆಗೆ ಸೇರಿಸಲು ಕಷ್ಟಪಡುವಂತಾಗಿದೆ. ಹಾಗಾಗಿ ಸಮವಸ್ತ್ರ, ಪುಸ್ತಕಗಳು, ನೋಟ್ ಬುಕ್ ಮತ್ತು ಅಗತ್ಯ ಶೈಕ್ಷಣಿಕ ವಸ್ತುಗಳನ್ನು ಒಳಗೊಂಡ ಶೈಕ್ಷಣಿಕ ಕಿಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಚೇತನ್, ಜಿಲ್ಲಾಧ್ಯಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]