ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 ಮಾರ್ಚ್ 2022
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಸ್ಕೂಟರ್ ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ ನಡೆಸಿದರು.
ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು. ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇಳಿದಾಗಲೂ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವ ಬದಲು ಮನಸೋ ಇಚ್ಛೆ ಹೆಚ್ಚಳ ಮಾಡುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು ದೂರಿದರು.
ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಉಕ್ರೇನ್, ರಷ್ಯಾ ಯುದ್ಧದ ನೆಪದಲ್ಲಿ ಇಂಧನ ಬೆಲೆಯನ್ನು ಮತ್ತೆ ಹೆಚ್ಚಳ ಮಾಡಿದೆ. ಬೆಲೆಗಳನ್ನು ನಿಯಂತ್ರಿಸಿ ಜನಸಾಮಾನ್ಯರ ಬದುಕು ಸುಗಮವಾಗಿ ಮಾಡಬೇಕಿದ್ದ ಕೇಂದ್ರ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದ್ದು, ಕೂಡಲೇ ಜನ ವಿರೋಧಿ ಕೇಂದ್ರ ಸರ್ಕಾರವನ್ನು ವಜಾ ಮಾಡುವಂತೆ ಒತ್ತಾಯಿಸಲಾಗಿದೆ.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ರವಿ ಕಾಟಿಕೆರೆ ಹಾಗೂ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಚೇತನ್, ಯುವ ಮುಖಂಡ ಸಿ.ಜಿ.ಮಧುಸೂದನ್, ಅಲ್ಪಸಂಖ್ಯಾತ ಕಾಂಗ್ರೆಸ್ ನಗರ ಅಧ್ಯಕ್ಷ ಮೊಹಮ್ಮದ್ ನಿಹಾಲ, ಚಂದ್ರೋಜಿ ರಾವ್, ರವಿ, ಕಿರಣ, ಸಾಗರ್, ಸುಹಾಸ, ಮಂಜು, ವಿಕ್ರಂ, ಭರತ್ ಪ್ರತಿಭಟನೆಯಲ್ಲಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422