ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2020
ಪೆಟ್ರೋಲ್ ಮತ್ತು ಡೀಸೆಲ್ ನಿರಂತರ ಬೆಲೆ ಏರಿಕೆ ಖಂಡಿಸಿ ಇವತ್ತು ಶಿವಮೊಗ್ಗದಲ್ಲಿ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಸೈಕಲ್ ನಿಲ್ಲಿಸಿಕೊಂಡು ಪ್ರತಿಭಟಿಸಿದರು.
ಕರೋನಾದಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಈ ಸಂದರ್ಭದಲ್ಲಿ ಇಂಧನದ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆಯುತ್ತಿದೆ. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವುದಾಗಿ ಭರವಸೆ ಕೊಟ್ಟು, ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಈಗ ಇಂಧನ ಬೆಲೆ ಏರಿಕೆ ಮಾಡಿ, ಅಗತ್ಯ ವಸ್ತುಗಳ ಬೆಲೆಯು ಏರಿಕೆ ಆಗುವಂತೆ ಮಾಡಿದೆ ಎಂದು ಆರೋಪಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎನ್ಎಸ್ಯುಐ ಕಾರ್ಯಕರ್ತರು ಸೈಕಲ್ ಹೊಡೆದು ಪ್ರತಿಭಟಿಸಿದರು.
ಸಂಘಟನೆ ರಾಜ್ಯ ಉಪಾಧ್ಯಕ್ಷ ಚೇತನ್, ಜಿಲ್ಲಾಧ್ಯಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯತ್, ಗ್ರಾಮಾಂತರ ಅಧ್ಯಕ್ಷ ರವಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422