ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022
ಅತಿಥಿ ಉಪನ್ಯಾಸಕರ ಪರವಾಗಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ. ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎನ್.ಎಸ್.ಯು.ಐ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡಸಿದ ವಿದ್ಯಾರ್ಥಿಗಳು, ರಾಜ್ಯವ್ಯಾಪಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಅತಿಥಿ ಉಪನ್ಯಾಸಕರ ಗೋಳು ಕೇಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.
ಉದ್ಯೋಗ ಭದ್ರತೆ ಇಲ್ಲದೆ ಅತಿಥಿ ಉಪನ್ಯಾಸಕರ ಜೀವ ಸಂಕಷ್ಟದಲ್ಲಿದೆ. ನಿಶ್ಚಿತ ಆದಾಯವಿಲ್ಲದೆ ಇರುವುದರಿಂದ ಅತಿಥಿ ಉಪನ್ಯಾಸಕರು ಪರಿತಪಿಸುತ್ತಿದ್ದಾರೆ. ಆದ್ದರಿಂದ ಕೂಡಲೆ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಎನ್.ಎಸ್.ಯು.ಐ ಕಾರ್ಯಾಧ್ಯಕ್ಷ ರವಿಕುಮಾರ್, ನಗರಾಧ್ಯಕ್ಷ ವಿಜಯ ಕುಮಾರ್, ಚಂದ್ರೋಜಿ ರಾವ್, ರವಿ, ಕಿರಣ್, ಸಂಜು, ಸುಹಾಸ್, ಸುಶ್ಮಿತಾ, ಯಶೋದಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422