ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020
ಪದವಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗು, ಲ್ಯಾಪ್’ಟಾಪ್ ವಿತರಿಸಬೇಕು ಎಂದು ಒತ್ತಾಯಸಿ ಶಿವಮೊಗ್ಗ NSUI ವತಿಯಿಂದ ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾಂಗ್ರೆಸ್ ಸರ್ಕಾರವಿದ್ದಾಗ ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ಕೊಡಲಾಗಿತ್ತು. ಆದರೆ ಕಳೆದ ಎರಡು ವರ್ಷದಿಂದ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಣೆ ಆಗಿರಲಿಲ್ಲ. ಈ ಬಾರಿ ಪುನಃ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ವಿತರಿಸಲಾಗಿದೆ.
ಕಳೆದು ಎರಡು ವರ್ಷದಿಂದ ಲ್ಯಾಪ್’ಟಾಪ್ ಸಿಗದ ವಿದ್ಯಾರ್ಥಿಗಳಿಗೂ ಈ ಬಾರಿ ವಿತರಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ NSUI ವತಿಯಿಂದ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
NSUI ರಾಜ್ಯ ಉಪಾಧ್ಯಕ್ಷ ಚೇತನ್, ಜಿಲ್ಲಾಧಕ್ಷ ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರ ಅಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Shimoga NSUI held a protest to issue laptops for all the degree students.