ಪಿಪಿಇ ಸೂಟ್ ಧರಿಸಿ ವಿನೋಬನಗರದಲ್ಲಿರುವ ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಯತ್ನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಿಇಟಿ, ವಿಟಿಯು ಮತ್ತು ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇವತ್ತು ಶಿವಮೊಗ್ಗದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಿಪಿಇ ಸೂಟ್ ಧರಿಸಿ ಪ್ರತಿಭಟನೆ

ರಾಜ್ಯದಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಪ್ರತಿದಿನ ಸಾವಿರಾರು ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಸಂದರ್ಭದಲ್ಲಿ ಸಿಇಟಿ, ವಿಟಿಯು, ಪದವಿ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಬಾರದು. ಆದರೂ ಸರ್ಕಾರ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಇವುಗಳನ್ನು ಕಡ್ಡಾಯವಾಗಿ ಮುಂದೂಡಬೇಕು ಎಂದು ಅಗ್ರಹಿಸಿ, ಪಿಪಿಇ ಸೂಟ್ ಧರಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಮನೆಗೆ ಮುತ್ತಿಗೆ ಯತ್ನ

ಪಿಪಿಇ ಸೂಟ್ ‍ಧರಿಸಿದ್ದ ಕಾರ್ಯಕರ್ತರು, ವಿನೋಬನಗರದಲ್ಲಿರುವ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಇವರನ್ನು ತಡೆದು ಬಂಧಿಸಿದರು.

https://www.facebook.com/liveshivamogga/videos/663445217595365/?t=23

ಎನ್‍ಎಸ್‍ಯುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಶ್ರೀಜಿತ್, ಜಿಲ್ಲಾಧ‍್ಯಕ್ಷ ಬಾಲಾಜಿ, ಯುವ ಕಾಂಗ್ರೆಸ್‍ನ ಮಧುಸೂದನ್, ಮಹಮದ್ ನಿಹಾಲ್, ವಿನಯ್, ವಿಜಯ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment