ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾರಿನ ಮೇಲೆ ಕಲ್ಲು ತೂರಟವನ್ನು ಖಂಡಿಸಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಲಾಯಿತು.
ಗೋಪಿ ಸರ್ಕಲ್‌ನಿಂದ ಮಹಾವೀರ ಸರ್ಕಲ್‌ವರೆಗೆ ಎನ್‌ಎಸ್‌ಯುಐ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
‘ಜಾರಕಿಹೊಳಿ’ ಕೈಗೆ ಕೋಳ
ಪಂಜಿನ ಮೆರವಣಿಗೆಯಲ್ಲಿ ರಮೇಶ್ ಜಾರಕಿಹೊಳಿ ಮುಖವಾಡ ಧರಿಸಿದ್ದ ವ್ಯಕ್ತಿಯ ಕೈಗೆ ಚೈನ್ ಕಟ್ಟಿ, ಎಳೆದು ತರಲಾಯಿತು. ಮೆರವಣಿಗೆ ಉದ್ದಕ್ಕೂ ರಮೇಶ ಜಾರಕಿಹೊಳಿಯನ್ನ ಬಂಧಿಸಬೇಕು ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಆಗ್ರಹಿಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಸಿಡಿ ಪ್ರಕರಣದ ಸಂತ್ರಸ್ತೆಗೆ ಭದ್ರತೆ ಒದಗಿಸಿಲ್ಲ. ಇನ್ನು ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿಯನ್ನು ಬಂಧಿಸುವಲ್ಲಿ ಸರ್ಕಾರ ಕ್ರಮ ಕೈಗೊಂಡಿಲ್ಲ. ಸಂತ್ರಸ್ತೆಯ ಪರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಬಿಜೆಪಿ ಸರ್ಕಾರದಿಂದ ಇಡೀ ರಾಜ್ಯ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಪ್ರಮುಖರಾದ ವಿಜಯ್ ಕುಮಾರ್, ಮಧು ಸೂದನ್, ಚೇತನ್, ಬಾಲಾಜಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
VIDEO REPORT
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200