ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2020
ಸಿಇಟಿ, ವಿಟಿಯು ಮತ್ತು ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇವತ್ತು ಶಿವಮೊಗ್ಗದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಿಪಿಇ ಸೂಟ್ ಧರಿಸಿ ಪ್ರತಿಭಟನೆ
ರಾಜ್ಯದಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಪ್ರತಿದಿನ ಸಾವಿರಾರು ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಸಂದರ್ಭದಲ್ಲಿ ಸಿಇಟಿ, ವಿಟಿಯು, ಪದವಿ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಬಾರದು. ಆದರೂ ಸರ್ಕಾರ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಇವುಗಳನ್ನು ಕಡ್ಡಾಯವಾಗಿ ಮುಂದೂಡಬೇಕು ಎಂದು ಅಗ್ರಹಿಸಿ, ಪಿಪಿಇ ಸೂಟ್ ಧರಿಸಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಮನೆಗೆ ಮುತ್ತಿಗೆ ಯತ್ನ
ಪಿಪಿಇ ಸೂಟ್ ಧರಿಸಿದ್ದ ಕಾರ್ಯಕರ್ತರು, ವಿನೋಬನಗರದಲ್ಲಿರುವ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಇವರನ್ನು ತಡೆದು ಬಂಧಿಸಿದರು.
ಎನ್‍ಎಸ್‍ಯುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಶ್ರೀಜಿತ್, ಜಿಲ್ಲಾಧ‍್ಯಕ್ಷ ಬಾಲಾಜಿ, ಯುವ ಕಾಂಗ್ರೆಸ್‍ನ ಮಧುಸೂದನ್, ಮಹಮದ್ ನಿಹಾಲ್, ವಿನಯ್, ವಿಜಯ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]