ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 FEBRUARY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA | ತೆರಿಗೆ ಹಂಚಿಕೆ, ಬರ ಪರಿಹಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಿತು.
ಬೈಪಾಸ್ ರಸ್ತೆಯಲ್ಲಿರುವ ವಿಜಯೇಂದ್ರ ನಿವಾಸಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು.
ಸಂಸದರಿಗೆ ದಮ್ಮು, ತಾಖತ್ತು ಇದ್ದರೆ
ಇದಕ್ಕೂ ಮೊದಲು ಬೈಪಾಸ್ ರಸ್ತೆಯಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಬಿ.ಎ.ರಮೇಶ್ ಹಗ್ಡೆ, ಕೇಂದ್ರದಲ್ಲಿ ಮೋದಿ ಆಡಳಿತ ಬಂದಾಗಿನಿಂದ ರಾಜ್ಯದ ವಿರುದ್ಧ ಮಸಲತ್ತು ಮಾಡಲಗುತ್ತಿದೆ. ರಾಜ್ಯದ 25 ಬಿಜೆಪಿ ಸಂಸದರಿಗೆ ರಾಜ್ಯದ ಪಾಲಿನ ತೆರಿಗೆ ಹಣ ಕೇಳಲು ದಮ್ಮು ಇಲ್ಲ. ತಾಕತ್ತು ಇಲ್ಲ. ಕೇವಲ ಮೋದಿ ಮನ್ ಕಿ ಬಾತ್ ಕೇಳಿ ಸುಮ್ಮನೆ ಕೂತಿದ್ದಾರೆ. 223 ತಾಲೂಕಿನಲ್ಲಿ ಬರ ಇದೆ. ಆದರೂ ಮೋದಿ ಸರ್ಕಾರ ಪರಿಹಾರದ ಪಾಲಿನ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಜಯೇಂದ್ರ ಮನೆ ಮುತ್ತಿಗೆ ಯತ್ನ
ಇನ್ನು, ಎನ್‌ಎಸ್‌ಯುಐ ಕಾರ್ಯಕರ್ತರು ಬಿ.ವೈ.ವಿಜಯೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಮೊದಲೆ ಬ್ಯಾರಿಕೇಡ್ ಹಾಕಿದ್ದ ಪೊಲೀಸರು, ಎನ್‌ಎಸ್‌ಯುಐ ಕಾರ್ಯಕರ್ತರನ್ನು ವಾಶಕ್ಕೆ ಪಡೆದರು. ಪ್ರತಿಭಟನೆ ಹಿನ್ನೆಲೆ ವಿಜಯೇಂದ್ರ ಮನೆ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಇದನ್ನೂ ಓದಿ – ಡಿಸಿ ಕಚೇರಿಗೆ ಗೋವುಗಳನ್ನು ತಂದು ಹೋರಾಟ, ‘ಸರ್ಕಾರಕ್ಕೆ ರೈತರು, ಗೋವುಗಳ ಶಾಪ ಶತಸಿದ್ಧ’
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಪ್ರಮುಖರಾದ ಚೇತನ್, ಮಧುಸೂದನ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಸೇರಿದಂತೆ ಹಲವರು ಇದ್ದರು.