ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್‌, ಕಡಿಮೆ ವೆಚ್ಚದಲ್ಲಿ ಹೈಟೆಕ್‌ ಟ್ರೀಟ್‌ಮೆಂಟ್‌, ವೈದ್ಯರು ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಿಡ್ನಿ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿರುವ ಎನ್‌.ಯು ಆಸ್ಪತ್ರೆ ಈಗ ಶಿವಮೊಗ್ಗ ಕಿಡ್ನಿ (Kidney) ಆಸ್ಪತ್ರೆಯಾಗಿ ಮರುನಾಮಕರಣಗೊಂಡಿದೆ. ಕಿಡ್ನಿ ದಿನದ ಅಂಗವಾಗಿ ಇವತ್ತು ನೂತನ ಹೆಸರು ಅನಾವರಣ ಮಾಡಲಾಯಿತು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಮರುನಾಮಕರಣಕ್ಕೆ ಕಾರಣ ನೀಡಿದರು.

ಯಾರೆಲ್ಲ ಏನೆಲ್ಲ ಹೇಳಿದರು?

ನವಜಾತ ಶಿಶುಗಳಿಂದ ಎಲ್ಲ ವಯೋಮಾನದವರಿಗೆ ಕಿಡ್ನಿ ಸಮಸ್ಯೆ ಆಗುತ್ತಿದೆ. ಡಯಾಬೆಟಿಕ್ ಕಿಡ್ನಿ ಸಮಸ್ಯೆ ಈಗ ಉಲ್ಬಣಗೊಂಡಿದೆ. ಜೀವನಶೈಲಿಯೆ ಇದಕ್ಕೆ ಮೂಲ ಕಾರಣ. ಉತ್ತಮ ಜೀವನ ಶೈಲಿ ರೂಢಿಸಿಕೊಂಡರೆ ಕಿಡ್ನಿ ಸಮಸ್ಯೆಯಿಂದ ಪಾರಾಗಬಹುದು. ಎನ್‌ಯು ಆಸ್ಪತ್ರೆ ಕಿಡ್ನಿ ಚಿಕಿತ್ಸೆಗೆ ಸೀಮಿತ. ಇದು ಹೆಚ್ಚು ಜನರಿಗೆ ತಲುಪಲಿ ಎಂಬ ಕಾರಣಕ್ಕೆ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗಿದೆ.

– ಡಾ. ಪ್ರದೀಪ್‌.ಎಂ.ಜಿ, ಯುರಾಲಜಿಸ್ಟ್‌ ಮತ್ತು ಕಿಡ್ನಿ ಟ್ರಾನ್ಸ್‌ಪ್ಲಾಂಟ್‌ ಸರ್ಜನ್

Dr-Pradeep-and-Dr-Praveen-NU-Shimoga-kidney-hospital.

ಮಧ್ಯ ಕರ್ನಾಟಕದಲ್ಲಿ ಎನ್‌.ಯು. ಆಸ್ಪತ್ರೆಯಲ್ಲಿ ಕಿಡ್ನಿಗೆ ಅತ್ಯುತ್ತಮ ಚಕಿತ್ಸೆ ನೀಡಲಾಗುತ್ತಿದೆ. ಇದು ಸಾಮಾನ್ಯ ಆಸ್ಪತ್ರೆಯಂತಲ್ಲ. ಈ ವಿಷಯವನ್ನು ಜನರಿಗೆ ಮನದಟ್ಟು ಮಾಡಲು ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂದು ಮರು ನಾಮಕರಣ ಮಾಡಲಾಗಿದೆ. ಇಲ್ಲಿ ಕಳೆದ ಐದು ವರ್ಷದಲ್ಲಿ 18 ಕಿಡ್ನಿ ಟ್ರಾನ್ಸ್‌ಪ್ಲಾಂಟ್‌ ಮಾಡಲಾಗಿದೆ. ಕಿಡ್ನಿ ಆರೈಕೆಯಲ್ಲಿ ಸುಧಾರಿತ ಚಿಕಿತ್ಸೆಯನ್ನು ನೀಡುವ ಮೂಲಕ ಕೊನೆಯ ಹಂತದ ಮೂತ್ರಪಿಂಡ ಕಾಯಿಲೆ ಹೊಂದಿರುವ ರೋಗಿಗಳಿಗೂ ಹೊಸ ಭರವಸೆ ತುಂಬಿದೆ.

– ಡಾ. ಪ್ರವೀಣ್ ಮಾಳವದೆ, ಟ್ರಾನ್ಸ್ ಪ್ಲಾಂಟ್ ಫಿಸಿಷಿಯನ್

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಿಡ್ನಿ (Kidney) ಚಿಕಿತ್ಸೆಗೆ ಈ ಭಾಗದ ಜನರು ಮಣಿಪಾಲ, ಬೆಂಗಳೂರಿನ ವಿವಿಧ ಆಸ್ಪತ್ರೆಗೆ ತೆರಳುತ್ತಿದ್ದರು. ಎನ್‌.ಯು. ಆಸ್ಪತ್ರೆ ಸ್ಥಾಪನೆಯಾದಾಗಿನಿಂದ ಶಿವಮೊಗ್ಗದಲ್ಲಿಯೇ ಕಡಿಮೆ ವೆಚ್ಚದಲ್ಲಿ ಅತ್ಯಾಧುನಿಕ ಚಿಕಿತ್ಸೆ ದೊರೆಯುತ್ತಿದೆ. ಶಿವಮೊಗ್ಗ ಕಿಡ್ನಿ ಆಸ್ಪತ್ರೆಯು (ಎನ್‌.ಯು ಆಸ್ಪತ್ರೆ) ರಕ್ತದ ಗುಂಪು ಹೊಂದಾಣಿಕೆಯಾಗದವರಿಗೂ ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್‌ಪ್ಲಾಂಟ್‌ ಮಾಡಿದ ಮಲೆನಾಡು ಭಾಗದ ಮೊದಲ ಆಸ್ಪತ್ರೆಯಾಗಿದೆ. ಇನ್ನು ಹೆಚ್ಚಿನ ಜನರಿಗೆ ಸೇವೆ ವಿಸ್ತರಿಸಲು ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅರಿವಳಿಕೆ ತಜ್ಞರಾದ ಡಾ. ಕಾರ್ತಿಕ್ ಎಸ್.ಎಲ್ ಮತ್ತು ಡಾ. ಆಕಾಶ್ ಜೆ.ಎಸ್ ಉಪಸ್ಥಿತರಿದ್ದರು.

NFC-Chicken-Kabab

ಇದನ್ನೂ ಓದಿ » ಮುಸ್ಲಿಮ್‌ ಬಜೆಟ್‌ ಆರೋಪಕ್ಕೆ ಮಧು ಬಂಗಾರಪ್ಪ ತಿರುಗೇಟು, ಏನಂದ್ರು? ಇಲ್ಲಿದೆ ನಾಲ್ಕು ಪಾಯಿಂಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 13, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment