ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 30 SEPTEMBER 2024 : ಚೀನಾ ಬೆಳ್ಳುಳ್ಳಿ (garlic) ಮಾರಾಟದ ಶಂಕೆ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (ಎಫ್‌ಎಸ್‌ಎಸ್‌ಎಐ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳುಳ್ಳಿ ಸ್ಯಾಂಪಲ್‌ಗಳನ್ನು ವಶಕ್ಕೆ ಪಡೆದು ಲ್ಯಾಬ್‌ಗೆ ಕಳುಹಿಸಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಎಪಿಎಂಸಿ, ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾ ಕೆಲವು ಮಾರಾಟಗಾರರ ಮೇಲೆ ದಾಳಿ ನಡೆಸಿದ್ದಾರೆ. ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವ ಶಂಕೆ ಮೇರೆಗೆ ಎಫ್‌ಎಸ್‌ಎಸ್‌ಎಐ ಅಧಿಕಾರಿ ಸದಾಶಿವ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುವ ಹಿನ್ನೆಲೆ ಕೇಂದ್ರ ಸರ್ಕಾರ ಚೀನಾ ಬೆಳ್ಳುಳ್ಳಿ ಮಾರಾಟವನ್ನು ಭಾರತದಲ್ಲಿ ನಿಷೇಧಿಸಿದೆ. ಹೀಗಿದ್ದೂ ದೇಶದ ವಿವಿಧೆಡೆ ಚೀನಾ ಬೆಳ್ಳುಳ್ಳಿ ಮಾರಾಟದ ಆರೋಪಗಳಿದ್ದವು. ಶಿವಮೊಗ್ಗದಲ್ಲಿಯು ಇದೇ ಶಂಕೆ ಮೇರೆಗೆ ದಾಳಿ ನಡೆಸಲಾಗಿದೆ. ಸದ್ಯ ಸಂಗ್ರಹಿಸಲಾಗಿರುವ ಸ್ಯಾಂಪಲ್ ಆನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ವರದಿ ಬಳಿಕ ಸ್ಪಷ್ಟತೆ ಲಭಿಸಲಿದೆ.
ಇದನ್ನೂ ಓದಿ » ಕರ್ನಾಟಕ ಸಂಘ, ನೂತನ ಕಾರ್ಯಕಾರಿ ಸಮಿತಿಗೆ 15 ಮಂದಿ ಆಯ್ಕೆ