ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 MAY 2024
SHIMOGA : ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳದ ಅಧಿಕಾರಿಗಳು ಅಡಿಕೆ ವ್ಯಾಪಾರ ಮಳಿಗೆಗಳು, ಗೋದಾಮುಗಳ (Godown) ಮೇಲೆ ದಿಢೀರ್ ದಾಳಿ ನಡೆಸಿ, ದಾಸ್ತಾರು ಪರಿಶೀಲಿಸಿದರು. 40 ಅಧಿಕಾರಿಗಳು ದಿಢೀರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ವಿಭಾಗ ವ್ಯಾಪ್ತಿಯ ಜಾರಿ ಮತ್ತು ಜಾಗೃತಿ ದಳ, ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆ ಅಧಿಕಾರಿಗಳು ಗೋದಾಮುಗಳಲ್ಲಿ ತಪಾಸಣೆ ನಡೆಸಿದರು. ಅಕ್ರಮ ವಹಿವಾಟು ದಾಸ್ತಾನು ಪತ್ತೆ ಹಚ್ಚಿ ಸಮಾನ ಮೊತ್ತದಷ್ಟು ದಂಡ ವಿಧಿಸಲಾಗಿದೆ. ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲ ಅಡಿಕೆ ವರ್ತಕರ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದರು. ಅಕ್ರಮವಾಗಿ ಅಡಿಕೆ ಸಂಗ್ರಹಿಸಿದ್ದ ವ್ಯಾಪಾರಿಗಳ ವಿರುದ್ಧ ಜಿಎಸ್‌ಟಿ ಕಾಯ್ದೆ ಅಡಿ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ATMನಲ್ಲಿ ಹಣ ಬಿಡಿಸುತ್ತಿದ್ದಾಗ ಒಳ ನುಗ್ಗಿದ ಯುವಕ, ದುಡ್ಡಿಗಾಗಿ ವ್ಯಕ್ತಿಯ ಅಟ್ಟಾಡಿಸಿ ಅಟ್ಯಾಕ್
ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳ, ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರು, ಉಪ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422