ಶಿವಮೊಗ್ಗ: ವಿದ್ಯಾನಗರದಲ್ಲಿರುವ ಆಹಾರ ಪದಾರ್ಥಗಳ ದಾಸ್ತಾನು ಗೋಡೌನ್ (food godown) ಮೇಲೆ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಅವಧಿ ಮೀರಿದ ಭಾರಿ ಪ್ರಮಾಣದ ತಿಂಡಿ ತಿನಿಸು ಪತ್ತೆಯಾಗಿವೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗ್ಗದ ಫಲಪುಷ್ಪ ಪ್ರದರ್ಶನಕ್ಕೆ ಲಕ್ಷ ಲಕ್ಷ ಜನ, ಮೈಸೂರು ಸಿಲ್ಕ್ ಸೀರೆ ದಾಖಲೆ ಮಾರಾಟ
ಅಪರ ಜಿಲ್ಲಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಶಿವಮೊಗ್ಗದಲ್ಲಿ ಮಾರಾಟ ಮಾಡಲು ಬೆಂಗಳೂರಿನಿಂದ ತಂದಿದ್ದ ವಿವಿಧ ಆಹಾರ ಪದಾರ್ಥಗಳನ್ನು ಈ ಗೋಡೌನ್‌ನಲ್ಲಿ ದಾಸ್ತಾನು ಮಾಡಲಾಗಿತ್ತು ಎಂದು ತಿಳಿದು ಬಂದಿದೆ.

ಈ ಗೋಡೌನ್‌ನಲ್ಲಿ ಅವಧಿ ಮುಗಿದಿದ್ದರೂ ರಾಶಿ ರಾಶಿ ತಿಂಡಿ ಪ್ಯಾಕೆಟ್‌ಗಳನ್ನು ಸಂಗ್ರಹಿಸಿಡಲಾಗಿತ್ತು. ಇದನ್ನು ಕಂಡು ಅಧಿಕಾರಿಗಳ ತಂಡವೇ ಬೆಸ್ತು ಬಿದ್ದಿದೆ. ಮಹಾನಗರ ಪಾಲಿಕೆ ಸಿಬ್ಬಂದಿ ಎಲ್ಲಾ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದು ನಾಶಪಡಿಸಿದರು. ಗೋಡೌನ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ನೋಟಿಸ್ ಜಾರಿಗೊಳಿಸಲಾಗಿದೆ.

LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು





