ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಹೊಸ ವರ್ಷಾಚರಣೆ ಹೊಸ್ತಿಲಲ್ಲಿ, ಶಿವಮೊಗ್ಗ ನಗರದ ಎರಡು ಕೇಕ್ (Cake ) ತಯಾರಿಕಾ ಘಟಕಗಳ ಮೇಲೆ ಉಪ ವಿಭಾಗಾಧಿಕಾರಿ ಸತ್ಯಾನಾರಾಯಣ ನೇತೃತ್ವದ ತಂಡ ದಾಳಿ ನಡೆಸಿದೆ. ಪರಿಶೀಲನೆ ನಡೆಸಿ ಮಾಲೀಕರಿಗೆ ನೊಟೀಸ್ ನೀಡಲಾಗಿದೆ.
ರವೀಂದ್ರ ನಗರದಲ್ಲಿರುವ ಕೇಕ್ ತಯಾರಕ ಘಟಕಗಳ ಮೇಲೆ ಇಂದು ಸಂಜೆ ದಾಳಿ ನಡೆಸಲಾಗಿದೆ.
ದಾಳಿ ವೇಳೆ ಏನೇನೆಲ್ಲ ಕಾಣಿಸ್ತು?
ದಾಳಿ ಸಂಬಂಧ ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದರು. ಇಲ್ಲಿ ಅವರು ತಿಳಿಸಿದ ಮೂರು ಪ್ರಮುಖಾಂಶ.
ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆ ಶಿವಮೊಗ್ಗದ ಎರಡು ಕೇಕ್ ತಯಾರಿಕಾ ಘಟಕಗಳ ಮೇಲೆ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆವು.
ತಪಾಸಣೆ ವೇಳೆ ಅಶುಚಿಯಾದ ವಾತಾವರಣ ಮತ್ತು ಅವಧಿ ಮುಗಿದಿರುವ ಕಚ್ಚಾ ವಸ್ತುಗಳು ಪತ್ತೆಯಾಗಿವೆ. ಮಹಾನಗರ ಪಾಲಿಕೆಯ ವಾಹನಗಳ ಕರೆಯಿಸಿ ಸ್ಥಳದಲ್ಲೇ ಅವುಗಳನ್ನು ನಾಶಪಡಿಸಲಾಗಿದೆ ಎಂದರು.
ನಿಯಮ ಉಲ್ಲಂಘಿಸಿದ ಘಟಕಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಇಂತಹ ಲೋಪ ಮರುಕಳಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಜನಶತಾಬ್ದಿ ಸೇರಿ ಹಲವು ರೈಲುಗಳ ಪ್ರಯಾಣ ಅವಧಿ ಕಡಿತ, ಯಶವಂತಪುರ ರೈಲಿನ ವೇಳಾಪಟ್ಟಿ ಬದಲು
ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ಆಹಾರ ಮತ್ತು ನಾಗರಿಕ ಸಬರಾಜು ಇಲಾಖೆ ಉಪ ನಿರ್ದೇಶಕ ಅವಿನ್, ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್ ಒಳಗೊಂಡ ತಂಡ ದಾಳಿ ನಡೆಸಿದೆ.
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





