ಹೊಸ ವರ್ಷಾಚರಣೆ ಮುನ್ನ ಶಿವಮೊಗ್ಗದ ಕೇಕ್‌ ತಯಾರಿಕಾ ಘಟಕಗಳ ಮೇಲೆ ದಾಳಿ, ಏನೇನೆಲ್ಲ ಸಿಕ್ತು?

ಶಿವಮೊಗ್ಗ: ಹೊಸ ವರ್ಷಾಚರಣೆ ಹೊಸ್ತಿಲಲ್ಲಿ, ಶಿವಮೊಗ್ಗ ನಗರದ ಎರಡು ಕೇಕ್‌ (Cake ) ತಯಾರಿಕಾ ಘಟಕಗಳ ಮೇಲೆ ಉಪ ವಿಭಾಗಾಧಿಕಾರಿ ಸತ್ಯಾನಾರಾಯಣ ನೇತೃತ್ವದ ತಂಡ ದಾಳಿ ನಡೆಸಿದೆ. ಪರಿಶೀಲನೆ ನಡೆಸಿ ಮಾಲೀಕರಿಗೆ ನೊಟೀಸ್‌ ನೀಡಲಾಗಿದೆ. ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ರವೀಂದ್ರ ನಗರದಲ್ಲಿರುವ ಕೇಕ್‌ ತಯಾರಕ ಘಟಕಗಳ ಮೇಲೆ ಇಂದು ಸಂಜೆ ದಾಳಿ ನಡೆಸಲಾಗಿದೆ.  

ದಾಳಿ ವೇಳೆ ಏನೇನೆಲ್ಲ ಕಾಣಿಸ್ತು?

ದಾಳಿ ಸಂಬಂಧ ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದರು. ಇಲ್ಲಿ ಅವರು ತಿಳಿಸಿದ ಮೂರು ಪ್ರಮುಖಾಂಶ.

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

POINT-1ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆ ಶಿವಮೊಗ್ಗದ ಎರಡು ಕೇಕ್‌ ತಯಾರಿಕಾ ಘಟಕಗಳ ಮೇಲೆ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆವು.

POINT-2ತಪಾಸಣೆ ವೇಳೆ ಅಶುಚಿಯಾದ ವಾತಾವರಣ ಮತ್ತು ಅವಧಿ ಮುಗಿದಿರುವ ಕಚ್ಚಾ ವಸ್ತುಗಳು ಪತ್ತೆಯಾಗಿವೆ. ಮಹಾನಗರ ಪಾಲಿಕೆಯ ವಾಹನಗಳ ಕರೆಯಿಸಿ ಸ್ಥಳದಲ್ಲೇ ಅವುಗಳನ್ನು ನಾಶಪಡಿಸಲಾಗಿದೆ ಎಂದರು.

POINT-3ನಿಯಮ ಉಲ್ಲಂಘಿಸಿದ ಘಟಕಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಇಂತಹ ಲೋಪ ಮರುಕಳಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Raid-on-Cake-making-centers-in-Shimoga

ಇದನ್ನೂ ಓದಿ » ಶಿವಮೊಗ್ಗ ಜನಶತಾಬ್ದಿ ಸೇರಿ ಹಲವು ರೈಲುಗಳ ಪ್ರಯಾಣ ಅವಧಿ ಕಡಿತ, ಯಶವಂತಪುರ ರೈಲಿನ ವೇಳಾಪಟ್ಟಿ ಬದಲು

ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ಆಹಾರ ಮತ್ತು ನಾಗರಿಕ ಸಬರಾಜು ಇಲಾಖೆ ಉಪ ನಿರ್ದೇಶಕ ಅವಿನ್‌, ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್‌ ಒಳಗೊಂಡ ತಂಡ ದಾಳಿ ನಡೆಸಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment