SHIVAMOGGA LIVE NEWS | 12 JANUARY 2024
SHIMOGA : 2006ರ ಏಪ್ರಿಲ್ 1ಕ್ಕಿಂತ ಪೂರ್ವದಲ್ಲಿ ನೇಮಕಾತಿ ಹೊಂದಿರುವ ಸರ್ಕಾರಿ ನೌಕರರನ್ನು ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ತರಲು ಶೀಘ್ರ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇದರಿಂದ ರಾಜ್ಯದ 11,366 ಬಾಧಿತ ಒಪಿಎಸ್ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಅನುಕೂಲವಾಗಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.
![]() |
ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರನ್ನು ಭೇಟಿಯಾಗಿ 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ ಎನ್‌ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ಪರಿಗಣಿಸಬೇಕು ಎಂದು ಸಂಘದ ವತಿಯಿಂದ ಕೋರಿದ್ದೆವು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಖ್ಯಮಂತ್ರಿಯವರ ಅನುಮೋದನೆ ಪಡೆದು ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ ಎಂದರು.
ಇದನ್ನೂ ಓದಿ – ಸಿ.ಎಸ್.ಷಡಾಕ್ಷರಿ ವರ್ಗಾವಣೆ ವಿಚಾರ, ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದ ಕೆಎಸ್‌ಎಟಿ, ಏನದು?
ಕೇಂದ್ರ ಸರ್ಕಾರದ ನಿರ್ದೇಶನದಂತೆ 2023ರ ಅಕ್ಟೋಬರ್ 18ರಂದು ಕರ್ನಾಟಕ ಸರ್ಕಾರ ಐಎಎಸ್ ಶ್ರೇಣಿಯ ಅಧಿಕಾರಿಗಳನ್ನು ಒಪಿಎಸ್ ಯೋಜನೆಗೆ ಒಳಪಡಿಸಿ ಆದೇಶ ಹೊರಡಿಸಿದೆ. ಅದೇ ರೀತಿ ಹಲವು ರಾಜ್ಯಗಳು ಕೇಂದ್ರದ ಆದೇಶವನ್ನು ಅನುಷ್ಠಾನಗೊಳಿಸಿವೆ. ಅದೇ ಮಾದರಿಯಲ್ಲಿ ರಾಜ್ಯದ ಸರ್ಕಾರಿ ನೌಕರರನ್ನು ಒಪಿಎಸ್ ಯೋಜನೆಗೆ ಪರಿಗಣಿಸಲು ಕಳೆದ ಮಾರ್ಚ್ 3ರಂದು ಸಂಘದಿಂದ ಮನವಿ ಸಲ್ಲಿಸಿದ್ದು ಆ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಅನುಮೋದನೆ ಹಂತದಲ್ಲಿದೆ ಎಂದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200