ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021
ಜೋರು ಮಳೆ ಮತ್ತು ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರಗೆ ಬಿಡುತ್ತಿರುವುದರಿಂದ ಶಿವಮೊಗ್ಗ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಲು ಆರಂಭವಾಗಿದೆ. ಹಾಗಾಗಿ ಈ ಭಾಗದ ಜನರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಹಳೆ ಶಿವಮೊಗ್ಗ ಭಾಗಕ್ಕೆ ನೀರು ನುಗ್ಗಿದೆ. ಸೀಗೆಹಟ್ಟಿ, ಕುಂಬಾರಗುಂಡಿ, ಮುರಾದ್ ನಗರದ ವಿವಿಧೆಡೆ ನೀರು ನುಗ್ಗಿದೆ. ವಿಚಾರ ತಿಳಿಯುತ್ತಿದ್ದಂತೆ ತಾಲೂಕು ಆಡಳಿತ, ಮಹಾನಗರ ಪಾಲಿಕೆ ಸಿಬ್ಬಂದಿಗಳು, ಪೊಲೀಸರು, ಎನ್‍ಡಿಆರ್‍ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಈ ಭಾಗದ ಜನರನ್ನು ಕಾಳಜಿ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ.
ಇತ್ತ ರಾಜೀವ್ ಗಾಂಧಿ ಬಡಾವಣೆ, ಇಮಾಂ ಬಡಾ, ಮುದಾಸಿರ್ ನಗರ, ಶಾಂತಮ್ಮ ಲೇಔಟ್‍ಗೂ ನೀರು ನುಗ್ಗಿದೆ. ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಗೆ ಬಿಟ್ಟರೆ ಈ ಭಾಗದ ಜನರ ರಕ್ಷಣ ಕಾರ್ಯ ನಡೆಸಲಾಗುತ್ತದೆ.
ರಾತ್ರಿ ವೇಳೆ ತುಂಗಾ ಜಲಾಶಯದಿಂದ ಹೆಚ್ಚಿಗೆ ನೀರು ಬಿಡುವ ಸಂಭವವಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸದ್ಯ ತೀರ್ಥಹಳ್ಳಿ ತಾಲೂಕಿನಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದೆ. ಈಗ ತುಂಗಾ ಜಲಾಶಯದಿಂದ 87 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ರಾತ್ರಿ ವೇಳೆ ಮಳೆ ಹೆಚ್ಚಳವಾದರೆ ತುಂಗಾ ಜಲಾಶಯದಿಂದ ಹೊರ ಹರಿವು ಹೆಚ್ಚಳವಾಗುವ ಸಂಭವವಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422