ಸಹ್ಯಾದ್ರಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ, ದಿನಾಂಕ ಪ್ರಕಟ, ಯಾವಾಗ? ಎಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ನ. 22ರ ಬೆಳಗ್ಗೆ 10ರಿಂದ ಕಾಲೇಜಿನ  (College) ಸಭಾಂಗಣದಲ್ಲಿ ‘ನಮ್ಮ ಸಹ್ಯಾದ್ರಿ, ನಮ್ಮ -2025’ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜೇಶ್ವರಿ ತಿಳಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕಾಲೇಜಿನಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉನ್ನತ ಹುದ್ದೆ, ಸ್ವಂತ ಉದ್ಯಮ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿದ್ದಾರೆ. ಈ ಎಲ್ಲರ ಅಭಿಪ್ರಾಯದಂತೆ ಹಿರಿಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ ಬಂದಿದೆ ಎಂದರು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಕಾರ್ಯಕ್ರಮವನ್ನು ಕುವೆಂಪು ವಿವಿ ಕುಲಪತಿ ಪ್ರೊ.ಶರತ್‌ ಅನಂತಮೂರ್ತಿ ಉದ್ಘಾಟಿಸಲಿದ್ದಾರೆ. ಇಡೀ ದಿನ ಹಿರಿಯ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುವುದು. ಸಹ್ಯಾದ್ರಿ ಕಾಲೇಜು 86ನೇ ವರ್ಷಾಚರಣೆಯಲ್ಲಿದೆ. ಕಾಲೇಜಿನಲ್ಲಿ ಓದಿದ ಹಲವರು ಉನ್ನತ ಸಾಧನೆ ಮಾಡಿದ್ದಾರೆ. ಕೆಲವರು ಭಾರತರತ್ನ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಈ ಮೂಲಕ ಕಾಲೇಜಿನ ಹೆಸರು ಪ್ರಖ್ಯಾತಿ ಪಡೆದಿದೆ ಎಂದರು.

Sahyadri-Science-college-principal-Rajeshwari.

ಕಾರ್ಯಕ್ರಮಕ್ಕೆ ಆಗಮಿಸುವ ಹಿರಿಯ ವಿದ್ಯಾರ್ಥಿಗಳು ಪರಮೇಶ್ -9986506166, ಸುರೇಶ್ -9731398336 ಸಂಪರ್ಕಿಸಬಹುದು.

ಸುದ್ದಿಗೋಷ್ಠಿಯಲ್ಲಿ ಡಾ.ನಾಗರಾಜ್ ಪರಿಸರ, ಉಮೇಶ್ ಶಾಸ್ತ್ರಿ, ನಾಗರಾಜ್ ನೇರಿಗೆ, ಶಶಿಕುಮಾ‌ರ್ ಮತ್ತಿತರರಿದ್ದರು.

ಇದನ್ನೂ ಓದಿ » ಸಾಗರದಲ್ಲಿ ಇವತ್ತು ಸಾಹಿತ್ಯ ಹುಣ್ಣಿಮೆ, ಎಲ್ಲಿ? ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ?

Leave a Comment