ಶಿವಮೊಗ್ಗ ದಸರಾದಲ್ಲಿ ಈ ಹಿಂದೆಯು ಒಮ್ಮೆ ಆನೆ ಅಂಬಾರಿ ಹೊತ್ತಿರಲಿಲ್ಲ, ಯಾವಾಗ? ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 OCTOBER 2023

SHIMOGA : ಈ ಬಾರಿ ದಸರಾದಲ್ಲಿ ಆನೆ ಮೇಲೆ ಅಂಬಾರಿ ಹೊರಿಸುವ ನಿರ್ಧಾರವನ್ನು ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ. ಕುಮ್ಕಿ ಆನೆ ನೇತ್ರಾವತಿ ಮರಿ ಹಾಕಿದ್ದರಿಂದ ದಿಢೀರ್‌ ಸಭೆ ನಡೆಸಿದ ಪಾಲಿಕೆ ಆಡಳಿತ ನಿರ್ಧಾರ ಪ್ರಕಟಿಸಿದೆ. ಪಾಲಿಕೆ ವಾಹನದಲ್ಲಿ ನಾಡದೇವಿ ಚಾಮುಂಡೇಶ್ವರಿ ಮೂರ್ತಿಯ ಮೆರವಣಿಗೆ ನಡೆಯಲಿದೆ.

ಶಿವಮೊಗ್ಗ ದಸರಾದಲ್ಲಿ ಆನೆ ಅಂಬಾರಿ ಹೊರದಿರುವ ಬೆಳವಣಿಗೆ ಈ ಹಿಂದೆಯು ನಡೆದಿದೆ. ಒಮ್ಮೆಯಂತು ಆನೆ ಅಂಬಾರಿ ಹೊರಲಿದೆಯೋ ಇಲ್ಲವೊ ಎಂಬುದರ ಕುರಿತು ಕೊನೆ ಕ್ಷಣದವರೆಗೆ ಕುತೂಹಲ ಮತ್ತು ಆತಂಕ ಮೂಡಿತ್ತು.

ಯಾವಾಗ? ಏನೇನಾಗಿತ್ತು?

2019ರಲ್ಲಿ ವಿಜಯದಶಮಿ ದಿನ ಅಂಬಾರಿ ಹೊರಬೇಕಿದ್ದ ಸಾಗರ ಆನೆ ದಿಢೀರ್‌ ಅಸ್ವಸ್ಥಗೊಂಡಿತ್ತು. ಭೇದಿ ಶುರುವಾಗಿತ್ತು. ವನ್ಯಜೀವಿ ವಿಭಾಗದ ವೈದ್ಯ ಡಾ. ವಿನಯ್‌ ಆನೆಗೆ ಚಿಕಿತ್ಸೆ ನೀಡಿದರು. ಸಾಗರ್‌ ಆನೆ ಅಸ್ವಸ್ಥಗೊಂಡಿದ್ದರಿಂದ ಅಂಬಾರಿ ಮೆರವಣಿಗೆ ನಡೆಯಲಿದೆಯೋ ಇಲ್ಲವೊ ಎಂಬ ಅನುಮಾನ ಮೂಡಿತ್ತು. ಕೊನೆ ಕ್ಷಣದಲ್ಲಿ ಪಾಲಿಕೆ ಲಾರಿಯಲ್ಲಿ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಚೇತರಿಸಿಕೊಂಡ ಸಾಗರ್‌ ಆನೆ ಮೆರವಣಿಗೆಯ ಅಂಬಾರಿ ಹೊತು ಸಾಗಿತ್ತು.

ತಾಲೀಮು ಇಲ್ಲದೆ ಮೆರವಣಿಗೆಗೆ

2021ರ ದಸರಾ ಸಂದರ್ಭ ಸಕ್ರೆಬೈಲು ಬಿಡಾರದ ಆನೆಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು ಅಂಬಾರಿ ಹೊತ್ತಿರಲಿಲ್ಲ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಕಡೆ ಕ್ಷಣದಲ್ಲಿ ಅನುಮತಿ ನೀಡಲಾಗಿತ್ತು. ಹಾಗಾಗಿ ಆನೆಗಳಿಗೆ ತಾಲೀಮು ನಡೆಸಿರಲಿಲ್ಲ. ಕೊನೆ ಘಳಿಗೆಯಲ್ಲಿ ಅಂಬಾರಿ ಹೊರಿಸುವುದು ಸರಿಯಲ್ಲ ಎಂದು ಪಾಲಿಕೆಯ ಲಾರಿಯಲ್ಲಿ ಮೆರವಣಿಗೆ ನಡೆಸಲಾಗಿತ್ತು. ಸಾಗರ್‌ ನೇತೃತ್ವದ ಗಜಪಡೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

ಇದನ್ನೂ ಓದಿ – ಶಿವಮೊಗ್ಗ ದಸರಾ, ಕೊನೆ ಕ್ಷಣದಲ್ಲಿ ಅಂಬಾರಿ ಮೆರವಣಿಗೆಯ ಪ್ಲಾನ್‌ ಬದಲು, ಏನದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2023

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment