ಸರ್ಕಲ್’ನಲ್ಲಿ ಅನುಮಾನಾಸ್ಪದ ವರ್ತನೆ, ಮೆಡಿಕಲ್ ಟೆಸ್ಟ್ ಬಳಿಕ ಯುವಕ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | DRUGS | 29 ಮೇ 2022

ಗಾಂಜಾ ಸೇವನೆ ಮಾಡುವವರ ಹೆಡೆಮುರಿ ಕಟ್ಟುವ ಕಾರ್ಯವನ್ನು ಶಿವಮೊಗ್ಗ ಪೊಲೀಸರು ಮುಂದುವರೆಸಿದ್ದಾರೆ. ನಗರದ ಬುದ್ದಾನಗರ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನ್ನು ವಿಚಾರಣೆ ಮಾಡಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಆತನನ್ನು ಬಂಧಿಸಲಾಗಿದೆ.

ಮಿಳಘಟ್ಟದ ಇರ್ಫಾನ್ ಪಠಾಣ್ (25) ಬಂಧಿತ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಬುದ್ದಾನಗರ ಸರ್ಕಲ್ ಬಳಿ ಇರ್ಫಾನ್ ಪಠಾಣ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ವಿಚಾರಣೆ ನಡೆಸಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.

ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಇರ್ಫಾನ್ ಪಠಾಣ್ ವಿರುದ್ಧ ಪ್ರಕರಣ ದಾಖಲು ಮಾಡಿ, ಬಂಧಿಸಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

SHIMOGA NANJAPPA HOSPITAL

ಇದನ್ನೂ ಓದಿ – ರಾತ್ರೋರಾತ್ರಿ ದೇವಸ್ಥಾನದ ಬಾಗಿಲ ಬೀಗ ಮುರಿದು ಹುಂಡಿ ಕಳ್ಳತನ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 29, 2022

Leave a Comment