ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 6 JANUARY 2025
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್ (Sweets) ಕಳುಹಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿಯ ಸೌಹಾರ್ದ ಪಟೇಲ್ ಬಂಧಿತ. ಕೊರಿಯರ್ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿ ಕಳುಹಿಸಿದ್ದ.
ಸೌಹಾರ್ದ ಪಟೇಲ್‌ನನ್ನು ವಶಕ್ಕೆ ಪಡೆದ ಕೋಟೆ ಠಾಣೆ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವೈಯಕ್ತಿಕ ಕಾರಣಕ್ಕೆ ಈತ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್‌ಗಳನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ್ ಮತ್ತು ಇಬ್ಬರು ವೈದ್ಯರ ವಿಳಾಸಕ್ಕೆ ಕಳುಹಿಸಿದ್ದ ಎನ್ನಲಾಗಿದೆ. ಈ ಸಿಹಿ ತಿನಿಸು ಕಹಿಯಾಗಿದ್ದವು.ನ್ಯಾಯಾಂಗ ಬಂಧನಕ್ಕೆ ಆರೋಪಿ
ತಮ್ಮ ಹೆಸರಿನಲ್ಲಿ ಕಹಿಯಾಗಿದ್ದ ಸಿಹಿ ತಿಂಡಿ ರವಾನೆಯಾಗಿರುವ ವಿಚಾರವನ್ನು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಗಂಭೀರವಾಗಿ ಪರಿಗಣಿಸಿದ್ದರು. ತಾವು ಯಾರಿಗು ಸಿಹಿ ತಿಂಡಿ ಕಳುಹಿಸಿಲ್ಲ ಎಂದ ಸ್ಪಷ್ಟಪಡಿಸಿದ್ದರು. ಘಟನೆ ಸಂಬಂಧ ಡಾ.ಧನಂಜಯ ಸರ್ಜಿ ತಮ್ಮ ಆಪ್ತ ಕಾರ್ಯದರ್ಶಿಯ ಮೂಲಕ ದೂರು ಕೊಡಿಸಿದ್ದರು. ಇನ್ನು, ಬಿಜೆಪಿ ನಿಯೋಗದೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿದ್ದರು. ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.ಗಂಭೀರವಾಗಿ ಪರಿಗಣಿಸಿದ್ದ ಡಾ.ಸರ್ಜಿ
ಇದನ್ನೂ ಓದಿ » ನಾ.ಡಿಸೋಜ ಅಂತ್ಯಕ್ರಿಯೆ ಕುರಿತು ಪುತ್ರನ ಹೇಳಿಕೆ, ಇಲ್ಲಿದೆ ವಿಡಿಯೋ