ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020
ಶಿವಮೊಗ್ಗದಲ್ಲಿ ಕರೋನಾ ಸೋಂಕಿಗೆ ತುತ್ತಾಗಿದ್ದ ಮತ್ತೊಬ್ಬ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಬಲಿಯಾದ ಒಟ್ಟು ಸೋಂಕಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಈಗ ಮೃತರಾಗಿರುವುದು ಯಾರು?
ಶಿವಮೊಗ್ಗದ ಕಸ್ತೂರ ಬಾ ರಸ್ತೆಯ 62 ವರ್ಷದ ವ್ಯಕ್ತಿಯೊಬ್ಬರು ಮೃತರಾಗಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಇವರಿಗೆ ಸೋಂಕು ಇರುವುದು ದೃಢವಾಗಿತ್ತು. ಹಾಗಾಗಿ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇನ್ನಷ್ಟೆ ಖಚಿತಗೊಳ್ಳಬೇಕಿದೆ
62 ವರ್ಷದ ವ್ಯಕ್ತಿಗೆ ಕರೋನ ಸೋಂಕು ತಗುಲಿತ್ತು. ಆದರೆ ಅವರ ಸಾವಿಗೆ ಇದೇ ಕಾರಣ ಎಂದು ಅಧಿಕಾರಿಗಳು ಖಚಿತಪಡಿಸಿಲ್ಲ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ಇನ್ನೂ ಈ ವ್ಯಕ್ತಿಯ ಹೆಸರು ಪ್ರಕಟವಾಗಿಲ್ಲ.
ಎಂಟಕ್ಕೆ ಏರಿದ ಸಾವಿನ ಸಂಖ್ಯೆ
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಸೋಂಕಿಗೆ ತುತ್ತಾಗಿ ಮೃತರಾಗಿರುವವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಆದರೆ ಈವರೆಗೂ ನಾಲ್ಕು ಮಂದಿ ಮಾತ್ರ ಕರೋನ ಸೋಂಕಿನಿಂದ ಮೃತರಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಉಳಿದ ಪ್ರಕರಣಗಳಲ್ಲಿ ಬೇರೆ ಆರೋಗ್ಯದ ಸಮಸ್ಯೆಗಳಿಂದ ಮೃತರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















