ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 03 FEBRUARY 2021
ಒಂದು ಎಕರೆಗೆ ಒಂದು ಕೋಟಿ 25 ಲಕ್ಷ ರೂ. ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಅದೆ ಗ್ರಾಮದಲ್ಲಿ ಪರ್ಯಾಯ ಜಮೀನು ಕೊಡಬೇಕು. ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದಲ್ಲಿ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ರೈತರ ಬೇಡಿಕೆ ಇದು.
ಭೂಮಿ ಕಳೆದುಕೊಳ್ಳುವ ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತರು, ಈ ರೈಲ್ವೆ ಮಾರ್ಗಕ್ಕಾಗಿ 1427 ಎಕರೆ ಜಮೀನನ್ನು ಸರ್ಕಾರ ಗುರುತಿಸಿದೆ. ಭೂ ಸ್ವಾಧೀನಪಡಿಸಿಕೊಳ್ಳಲು ಪ್ರಕಟಣೆಯನ್ನು ಹೊರಡಿಸಲಾಗಿದೆ. ಜಿಲ್ಲಾಧಿಕಾರಿ ಅವರು ಸಭೆ ನಡೆಸಿ ಪ್ರತಿ ಎಕರೆಗೆ 6 ಲಕ್ಷದಿಂದ 14 ಲಕ್ಷದವರೆಗೆ ಪರಿಹಾರ ಕೊಡಿಸುವುದಾಗಿ ತಿಳಿಸಿ ಒಪ್ಪಿಗೆ ಪತ್ರಕ್ಕೆ ಸಹಿ ಹಾಕುವಂತೆ ಹೇಳುತ್ತಿದ್ದಾರೆ ಎಂದು ರೈತರು ಆರೋಪಿಸಿದರು.
ಕೋಟಿ ಕೊಟ್ಟರೆ ಒಪ್ಪುತ್ತೇವೆ
ರೈಲ್ವೆ ಮಾರ್ಗದ ಜಮೀನಿಗೆ ಪ್ರತಿ ಎಕರೆಗೆ 1.25 ಕೋಟಿ ರೂ. ಪರಿಹಾರ ನೀಡಬೇಕು, ಇಲ್ಲವಾದಲ್ಲಿ ಅದೇ ಗ್ರಾಮದಲ್ಲಿ ಪರ್ಯಾಯ ಜಮೀನು ನೀಡಬೇಕು. ಅಡಕೆ ತೋಟಕ್ಕೆ ಪ್ರತಿ ಎಕರೆಗೆ 2.50 ಕೋಟಿ ರೂ. ಪರಿಹಾರ ಕೊಡಬೇಕು. ನಿರಾಶ್ರಿತ ರೈತರ ಕುಟುಂಬಕ್ಕೆ ಉದ್ಯೋಗ ಕೊಡಬೇಕು. ರೈತರ ಜಮೀನಿಗೆ ಹೋಗಲು ರಸ್ತೆ ಮಾಡಿಸಿಕೊಡಬೇಕು. ಸರ್ಕಾರಿ ಜಮೀನು, ಬಗರ್ ಹುಕುಂ, ಗ್ರಾಮಠಾಣಗಳಿಗೆ ಸೂಕ್ತ ಜಮೀನು ನಿಗದಿಪಡಿಸಬೇಕು ಎಂದು ರೈತರು ಒತ್ತಿಯಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತರ ಸಂಘದ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಸಮಿತಿ ಗೌರವಾಧ್ಯಕ್ಷ ಭೋಜಾನಾಯ್ಕ, ಅಧ್ಯಕ್ಷ ಜಗದೀಶ್ವರಯ್ಯ, ಉಪಾಧ್ಯಕ್ಷರಾದ ಹಾಲೇಶ ನಾಯ್ಕ, ನೇಮರಾಜ್, ಯೋಗೇಶ್, ಪ್ರಗತಿಪರ ಹೋರಾಟಗಾರ ಕೆ.ಎಲ್.ಅಶೋಕ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422