ಶಿವಮೊಗ್ಗದಲ್ಲಿ ಒಂದೇ ದಿನ ದಸರಾ, ಆಚರಣೆ ಕುರಿತು ಮಹತ್ವದ ಮೀಟಿಂಗ್, ಹೇಗಿರುತ್ತೆ ನಾಡಹಬ್ಬ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020

ಕರೋನಾ ಹಿನ್ನೆಲೆಯಲ್ಲಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಿ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲಾಗುವುದು ಎಂದು ಮೇಯರ್ ಸುವರ್ಣಾ ಶಂಕರ್ ಅವರು ತಿಳಿಸಿದರು.

119066040 1212556249105793 9222573346997577372 n.jpg? nc cat=100& nc sid=110474& nc ohc=Qan30cwo0JEAX9Owvsr& nc ht=scontent.fblr11 1

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ದಸರಾ ಹಬ್ಬ ಆಯೋಜನೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದ ಮೇಯರ್ ಸುವರ್ಣಾ ಶಂಕರ್, ಈ ಬಾರಿ ಮೆರವಣಿಗೆ ಇರುವುದಿಲ್ಲ. ಆದರೆ ಎಲ್ಲಾ ದೇವ ದೇವತೆಗಳನ್ನು ಒಂದು ಸೇರಿಸಿ ಬನ್ನಿ ಮುಡಿಯುವ ಕಾರ್ಯ ನಡೆಸಲಾಗುವುದು. ಇದೇ ರೀತಿ ಹಿಂದಿನ ವರ್ಷದಂತೆ ಇಡೀ ನಗರದ ದೀಪಾಲಂಕಾರ ಮಾಡಲಾಗುವುದು. ವಿಜಯ ದಶಮಿಗೆ ಸಂಬಂಧಿಸಿದಂತೆ ಇತರ ಯಾವುದೇ ದಸರಾ ಕಾರ್ಯಕ್ರಮಗಳು ಇರುವುದಿಲ್ಲ ಎಂದರು.

ಮನೆಯಲ್ಲೇ ಉತ್ಸವ ವೀಕ್ಷಣೆಗೆ ಲೈವ್

ಆಯುಕ್ತ ಚಿದಾನಂದ ವಟಾರೆ ಅವರು ಮಾತನಾಡಿ, ಈ ಬಾರಿ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿದೆ. ದಸರಾ ಆಚರಣೆ ಕುರಿತಾಗಿ ಇದುವರೆಗೆ ಸರ್ಕಾರದಿಂದ ಯಾವುದೇ ಮಾರ್ಗಸೂಚಿಗಳು ಬಂದಿರುವುದಿಲ್ಲ. ಆದರೆ ಸರ್ಕಾರದ ಸೂಚನೆ ಪ್ರಕಾರ ಶಿವಮೊಗ್ಗದಲ್ಲಿ ಈ ಬಾರಿ ಸರಳವಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಜನರು ಮನೆಯಲ್ಲಿಯೇ ಉತ್ಸವವನ್ನು ವೀಕ್ಷಿಸಲು ಅನುಕೂಲವಾಗುವಂತೆ ಕಾರ್ಯಕ್ರಮಗಳ ಲೈವ್ ಸ್ಟ್ರೀಮಿಂಗ್ ಸಹ ಮಾಡಬಹುದಾಗಿದೆ ಎಂದು ಹೇಳಿದರು.

118953186 1212556005772484 5386141508348410135 n.jpg? nc cat=109& nc sid=110474& nc ohc=wt3575vB8NgAX OrdFc& nc ht=scontent.fblr11 1

ಕಳೆದ ವರ್ಷ 17 ಲಕ್ಷ ಉಳಿತಾಯ

ಕಳೆದ ವರ್ಷ ದಸರಾ ಆಚರಣೆಗೆ ಸರ್ಕಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮುಖಾಂತರ 1.80ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ 1.63ಕೋಟಿ ರೂ. ವೆಚ್ಚ ಮಾಡಲಾಗಿದ್ದು, 17ಲಕ್ಷ ರೂ. ಉಳಿತಾಯವಿದೆ. ಈ ಅನುದಾನ ಹಾಗೂ ಇನ್ನಿತರ ಉಳಿಕೆ ಅನುದಾನ ಬಳಸಿಕೊಂಡು ದಸರಾ ಸಾಂಪ್ರದಾಯಿಕವಾಗಿ ಆಚರಿಸಬಹುದಾಗಿದೆ ಎಂದು ಸಭೆಗೆ ತಿಳಿಸಿದರು.

ಸದಸ್ಯರಿಂದ ವಿವಿಧ ಅಭಿಪ್ರಾಯ

ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್ ಅವರು ಮಾತನಾಡಿ, ಸರ್ಕಾರದ ಮಾರ್ಗಸೂಚಿ ಪ್ರಕಾರ ಅತ್ಯಂತ ಸರಳವಾಗಿ ಹಬ್ಬವನ್ನು ಆಚರಿಸಬೇಕು. ನಮ್ಮ ಆಚರಣೆಗಳು ಕರೋನಾ ಹೆಚ್ಚಾಗಲು ಕಾರಣವಾಗಬಾರದು. ಜನರ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿಜಯ ದಶಮಿಯ ಸಾಂಪ್ರದಾಯಿಕತೆಗೆ ಯಾವುದೇ ಧಕ್ಕೆ ಬಾರದಂತೆ ಅತ್ಯಂತ ಕಡಿಮೆ ಜನರನ್ನು ಸೇರಿಸಿ ಸರಳವಾಗಿ ಕಾರ್ಯಕ್ರಮ ರೂಪಿಸಬೇಕು ಎಂದು ಸದಸ್ಯ ಜ್ಞಾನೇಶ್ವರ್ ತಿಳಿಸಿದರು.

ಯಾವುದೇ ಆಡಂಬರ, ಅದ್ದೂರಿತನವಿಲ್ಲದೇ ಸರಳವಾಗಿ ದಸರಾ ಆಚರಿಸಬಹುದಾಗಿದೆ. ದಸರಾ ಆಚರಣೆಗೆ ಮೀಸಲಾಗಿರಿಸಿರುವ ಅನುದಾನದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಮಹಾನಗರ ಪಾಲಿಕೆ ವತಿಯಿಂದ 20ವೆಂಟಿಲೇಟರ್ ಒದಗಿಸುವ ನಿರ್ಣಯ ಕೈಗೊಳ್ಳಬೇಕು ಎಂದು ಸದಸ್ಯ ಎಚ್.ಸಿ.ಯೋಗೀಶ್ ತಿಳಿಸಿದರು.

ಉತ್ಸವದ ಆಶಯಕ್ಕೆ ಧಕ್ಕೆ ಬಾರದಂತೆ ವ್ಯವಸ್ಥಿತವಾಗಿ ದಸರಾ ಆಯೋಜಿಸುವ ಕುರಿತು ಎಲ್ಲರೂ ಸೇರಿ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸದಸ್ಯ ಚನ್ನಬಸಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 11, 2020

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment