ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಹಾಗೂ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಅ.28 ರಂದು ಒಂದು ದಿನದ ಜಾಗೃತಿ ಕಾರ್ಯಾಗಾರ (WorkShop) ಹಮ್ಮಿಕೊಳ್ಳಲಾಗಿದೆ.
ಎಂ.ಎಸ್.ಎಂ.ಇಗಳ ಕಾರ್ಯಕ್ಷಮತೆ ಹೆಚ್ಚಳ, ರಫ್ತು ಉತ್ತೇಜನ ಮತ್ತು ಸುಗಮಗೊಳಿಸುವಿಕೆ ಬಗ್ಗೆ ಮಾಚೇನಹಳ್ಳಿಯ ಶಾಂತಲಾ ಸ್ಪೆರೋಕ್ಯಾಸ್ಟ್ ಲರ್ನಿಂಗ್ ಸೆಂಟರ್‌ನಲ್ಲಿ ಕಾರ್ಯಾಗಾರ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್ ಉದ್ಘಾಟಿಸಲಿದ್ದಾರೆ. ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ , ಬೆಂಗಳೂರು ಜಂಟಿ ನಿರ್ದೇಶಕ ಸಿ.ಎಸ್.ಬಾಬು ಜಗದೀಶ್, ಲೀಡ್ ಬ್ಯಾಂಕ್ ಅಧಿಕಾರಿ ಬಿ.ಹೊನ್ನಪ್ಪ ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ » ವಿದ್ಯಾನಗರ ಫ್ಲೈ ಓವರ್ ಕೆಳಗೆ ‘ಚಿನ್ನದ ನಾಣ್ಯʼಗಳಿರುವ ಚೀಲ ಕೊಟ್ಟು ಗಡಿಬಿಡಿಯಲ್ಲಿ ಹೋದ ಉಡುಪಿಯ ವ್ಯಕ್ತಿ
WorkShop
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















