ಮಾಚೇನಹಳ್ಳಿಯಲ್ಲಿ ಜಾಗೃತಿ ಕಾರ್ಯಾಗಾರ, ಯಾರೆಲ್ಲ ಭಾಗವಹಿಸ್ತಾರೆ?

ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಹಾಗೂ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಅ.28 ರಂದು ಒಂದು ದಿನದ ಜಾಗೃತಿ ಕಾರ್ಯಾಗಾರ (WorkShop) ಹಮ್ಮಿಕೊಳ್ಳಲಾಗಿದೆ.

ಎಂ.ಎಸ್.ಎಂ.ಇಗಳ ಕಾರ್ಯಕ್ಷಮತೆ ಹೆಚ್ಚಳ, ರಫ್ತು ಉತ್ತೇಜನ ಮತ್ತು ಸುಗಮಗೊಳಿಸುವಿಕೆ ಬಗ್ಗೆ ಮಾಚೇನಹಳ್ಳಿಯ ಶಾಂತಲಾ ಸ್ಪೆರೋಕ್ಯಾಸ್ಟ್ ಲರ್ನಿಂಗ್ ಸೆಂಟರ್‌ನಲ್ಲಿ ಕಾರ್ಯಾಗಾರ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್ ಉದ್ಘಾಟಿಸಲಿದ್ದಾರೆ. ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ , ಬೆಂಗಳೂರು ಜಂಟಿ ನಿರ್ದೇಶಕ ಸಿ.ಎಸ್.ಬಾಬು ಜಗದೀಶ್, ಲೀಡ್ ಬ್ಯಾಂಕ್ ಅಧಿಕಾರಿ ಬಿ.ಹೊನ್ನಪ್ಪ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ » ವಿದ್ಯಾನಗರ ಫ್ಲೈ ಓವರ್‌ ಕೆಳಗೆ ‘ಚಿನ್ನದ ನಾಣ್ಯʼಗಳಿರುವ ಚೀಲ ಕೊಟ್ಟು ಗಡಿಬಿಡಿಯಲ್ಲಿ ಹೋದ ಉಡುಪಿಯ ವ್ಯಕ್ತಿ

Kalleshwara-Enterprises.webp

WorkShop

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment