SHIVAMOGGA LIVE NEWS | ACCIDENT | 1 ಜೂನ್ 2022
ಬೈಕುಗಳು ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಪೇಂಟಿಂಗ್ ಕೆಲಸ ಮಾಡುತ್ತಿದ್ದ ಗಣೇಶ್ ಎಂಬುವವರು ಮೃತ ದುರ್ದೈವಿ. ಇಲ್ಲಿನ ಮಮತಾ ಬಡಾವಣೆ ಬಳಿ ಘಟನೆ ಸಂಭವಿಸಿದೆ.
ರಾತ್ರಿ ಗಣೇಶ್ ಅವರು ಬೊಮ್ಮನಕಟ್ಟೆಯಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದರು. ಬೊಮ್ಮನಕಟ್ಟೆ ಕಡೆಗೆ ತೆರಳುತ್ತಿದ್ದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಆ ಬೈಕಿನಲ್ಲಿ ಮೂವರು ಸವಾರರಿದ್ದರು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಗಣೇಶ್ ಅವರು ಮೃತರಾಗಿದ್ದಾರೆ.
ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ, ಎಂಟು ತಿಂಗಳ ಗರ್ಭಿಣಿ ಹೊಟ್ಟೆಗೆ ಪೆಟ್ಟು
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು