ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 30 JULY 2023
SHIMOGA : ಕ್ಷುಲಕ ವಿಚಾರಕ್ಕೆ ನಡೆದ ಜಗಳ (Altercation) ಕೊಲೆಯಲ್ಲಿ ಅಂತ್ಯವಾಗಿದೆ. ಬೆಳಗ್ಗೆ ಚರಂಡಿ ಬಳಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ವಿದ್ಯಾನಗರದ 5ನೇ ತಿರುವಿನ ಸುಭಾಷ್ ನಗರದಲ್ಲಿ ಘಟನೆ ಸಂಭವಿಸಿದೆ. ಜ್ಞಾನೇಶ್ವರ್ (43) ಮೃತ ವ್ಯಕ್ತಿ. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಜ್ಞಾನೇಶ್ವರ್ ಸವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶನಿವಾರ ವಿದ್ಯಾನಗರದ 5ನೇ ತಿರುವಿನಲ್ಲಿರುವ ಸಂಬಂಧಿಯ ಮನೆಗೆ ಜ್ಞಾನೇಶ್ವರ್ ಬಂದಿದ್ದರು. ರಾತ್ರಿ ಸಂಬಂಧಿಯ ಜೊತೆಗೆ ವೈಯಕ್ತಿಕ ವಿಚಾರಕ್ಕೆ ಮಾತಿಗೆ ಮಾತು (Altercation) ಬೆಳೆದು ಜಗಳವಾಗಿದೆ ಎಂದು ಹೇಳಲಾಗುತ್ತಿದೆ. ಈ ವೇಳೆ ಜ್ಞಾನೇಶ್ವರ್ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವ ಉಂಟಾಗಿ ಚರಂಡಿ ಬಳಿ ಬಿದ್ದು ಸಾವನ್ನಪ್ಪಿದ್ದಾರೆ. ಸಂಬಂಧಿ ನಾಗರಾಜ್ ವಿರುದ್ಧ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ಹಾರಾಟ 20 ದಿನ ತಡವಾಗಲು ಕಾರಣವೇನು? ಇಲ್ಲಿದೆ 3 ಕಾರಣ
ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.