ಕ್ಷುಲಕ ವಿಚಾರಕ್ಕೆ ಕಿತ್ತಾಟ, ಶಿವಮೊಗ್ಗದಲ್ಲಿ ಯುವಕನಿಗೆ ಚಾಕುವಿನಿಂದ ಹಲ್ಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 APRIL 2024

SHIMOGA : ಕ್ಷುಲಕ ವಿಚಾರಕ್ಕೆ ಜಗಳವಾಡಿ ಯುವಕನೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬುದ್ದಾನಗರ 3ನೇ ಕ್ರಾಸ್‌ನಲ್ಲಿ ಘಟನೆ ಸಂಭವಿಸಿದೆ. ಪ್ಲಂಬಿಂಗ್‌ ಕೆಲಸ ಮಾಡುವ ಅಜಯ್‌ ಕುಮಾರ್‌ ಎಂಬಾತನ ಮೇಲೆ ಹಲ್ಲೆಯಾಗಿದೆ. ಲೋಹಿತ್‌ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಬುದ್ದಾನಗರದಲ್ಲಿ ನಿಂತಿದ್ದಾಗ ಅಜಯ್‌ ಕುಮಾರ್‌, ಲೋಹಿತ್‌ ಮಧ್ಯೆ ಕ್ಷುಲಕ ವಿಚಾರಕ್ಕೆ ಜಗಳವಾಗಿದೆ. ಈ ಸಂದರ್ಭ ಅಜಯ್‌ ಕುಮಾರ್‌ನ ತಲೆ, ಭುಜಕ್ಕೆ ಲೋಹಿತ್‌ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗಾಯಾಳುವಿಗೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಲೋಕಸಭೆ ಚುನಾವಣೆ‌, ಅಭ್ಯರ್ಥಿಗಳಿಗೆ ಸ್ವಂತ ವರದಿಗಾರರ ತಂಡ, ಕ್ಯಾಮರಾ ಟೀಮ್, ಏನಿವರ ಕೆಲಸ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 27, 2024

Leave a Comment