| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 9 JANUARY 2024
SHIMOGA : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬದಲು ಇರುವ ಉದ್ಯೋಗಗಳನ್ನು ಕಸಿದುಕೊಂಡಿದೆ. ನಿರುದ್ಯೋಗಿಗಳಿಗೆ ಸಹಾಯ ಮಾಡುವ ಸಲುವಾಗಿ ರಾಜ್ಯ ಸರ್ಕಾರ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಇದರಿಂದ ಲಕ್ಷಾಂತರ ನಿರುದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಜ.12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಡಾ. ಶರಣ ಪ್ರಕಾಶ್ ಪಾಟೀಲ್, ಡಾ ಸುಧಾಕರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು, ಯುವಕರು, ಸಾರ್ವಜನಿಕರು ಸೇರಿ ಸುಮಾರು 1 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ವೈದ್ಯಕೀಯ ಶಿಕ್ಷಣ ಸಚಿವ, ಮೂರು ದಿನ ಪ್ರವಾಸ, ಎರಡು ದಿನ ಡಿಸಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ್, ಪ್ರಮುಖರಾದ ಕಲೀಂ ಪಾಷಾ, ಮಂಜುನಾಥ ಬಾಬು, ಮಧು, ಎನ್.ಟಿ.ಪ್ರವೀಣ್ ಕುಮಾರ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()