ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022
ಓಂ ಶಕ್ತಿ ದರ್ಶನ ಮುಗಿಸಿ ಬಂದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದು ಶಿವಮೊಗ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಹಲವರಿಗೆ ಸೋಂಕು ತಗುಲಿರುವ ಭೀತಿ ಉಂಟಾಗಿದೆ.
ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ರಾಗಿಗುಡ್ಡದ ಮಹಿಳೆಯೊಬ್ಬರಿಗೆ ಕರೋನ ಸೋಂಕು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಇದು ಆತಂಕ ಮೂಡಿಸಿದೆ. ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ಮತ್ತಷ್ಟು ಮಂದಿಯಲ್ಲಿ ಸೋಂಕು ತಗುಲಿರುವ ಭೀತಿ ಎದುರಾಗಿದೆ.
ತಮಿಳುನಾಡಿಗೆ ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ 4143 ಮಂದಿ ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದಂತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. 77 ಬಸ್ಸುಗಳಲ್ಲಿ ಬಂದ ಭಕ್ತರನ್ನು ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಬಳಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಒಬ್ಬರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಇನ್ನು, ಓಂ ಶಕ್ತಿ ಪ್ರವಾಸದಿಂದ ಮರಳಿರುವವರು ಏಳು ದಿನ ಹೋಮ್ ಕ್ವಾರಂಟೈನ್’ಗೆ ಒಳಗಾಗುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ನಿನ್ನೆಗಿಂತಲೂ ಹೆಚ್ಚು ಜನರಿಗೆ ಕರೋನ ಸೋಂಕು, ಸಕ್ರಿಯ ಪ್ರಕರಣಗಳು ಏರಿಕೆ
ಇದನ್ನೂ ಓದಿ | ಶಿವಮೊಗ್ಗದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಕುರಿತು ಮಹತ್ವದ ಸಭೆ, ಜಿಲ್ಲಾಧಿಕಾರಿಯಿಂದ 10 ಪಾಯಿಂಟ್ ಸೂಚನೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422