ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 12 ಜನವರಿ 2020
ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಒಂದು ರೂಪಾಯಿ ನೀಡಬೇಕು ಎಂದು ಹಿಂದಿನ ಜಿಲ್ಲಾಧಿಕಾರಿ, ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್‌ಗೆ ಇಲ್ಲಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪೊನ್ನುರಾಜ್ 2011ರಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಆಗಿದ್ದ ವೇಳೆ ಕಂದಾಯ ಇಲಾಖೆ ನಿವೃತ್ತ ನೌಕರ ವಿನೋಬನಗರದ ಕೆ.ಶಿವಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸಿ, ಒಂದು ರೂ. ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಸತೀಶ್, 60 ದಿನಗಳಲ್ಲಿ ಕೆ.ಶಿವಪ್ಪ ಅವರಿಗೆ 1 ರೂ. ಪರಿಹಾರ ನೀಡುವಂತೆ ಜ.10ರಂದು ಆದೇಶಿಸಿದ್ದಾರೆ.
ಏನಿದು ಕೇಸ್? ಮಾನನಷ್ಟಕ್ಕೇನು ಕಾರಣ?
ಶಿವಪ್ಪ ನಿವೃತ್ತರಾಗಿದ್ದರೂ ಕಂದಾಯ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸಾರ್ವಜನಿಕರ ವ್ಯವಹಾರಗಳಿಗೆ ತೊಂದರೆ ಮಾಡುತ್ತಿದ್ದಾರೆಂದು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಎ.ಎಂ.ಮಹದೇವಪ್ಪ ಅಂದಿನ ಡಿಸಿ ಪೊನ್ನುರಾಜ್‌ಗೆ ದೂರು ನೀಡಿದ್ದರು. ವಿಚಾರಣೆ ನಡೆಸದೆ, ವಿವರಣೆ ಕೇಳಿ ನೋಟಿಸ್ ಕೂಡ ನೀಡದೆ ಶಿವಪ್ಪಗೆ ಯಾವುದೇ ಇಲಾಖೆ ಕಚೇರಿಗೆ ಹೋಗಬಾರದು ಎಂದು ಡಿಸಿ ಸುತ್ತೋಲೆ ಹೊರಡಿಸಿದ್ದರು.
ಪೊನ್ನುರಾಜ್ ಹೊರಡಿಸಿದ್ದ ಸುತ್ತೋಲೆ ತನ್ನ ವ್ಯವಹಾರಿಕ ಬದುಕಿನ ಮೇಲೆ ದುಷ್ಪರಿಣಾಮ ಬೀರಿದ್ದು, 25 ಲಕ್ಷ ರೂ.ಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಶಿವಪ್ಪ, 1 ರೂ.ಗೆ ಸೀಮಿತಗೊಳಿಸಿ 2014ರಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Shimoga JMFC court has ordered to pay One Rupee as relief fund over a Defamation Case. The Case was against Former Deputy Commissioner Ponnuraj.