ಆಶ್ರಯ ಮನೆಗೆ ಅರ್ಜಿ ಆಹ್ವಾನ, ಮಹಿಳೆಯರಿಗೆ ಮಾತ್ರ ಅವಕಾಶ, ಪುರುಷರಿಗೆ ಷರತ್ತು ಅನ್ವಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 NOVEMBER 2022

SHIMOGA | ನಿವೇಶನ ರಹಿತರಿಗೆ ಶಿವಮೊಗ್ಗದಲ್ಲಿ ಜಿ+2 ಮಾದರಿಯ ಮನೆಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 5 ರಿಂದ 2023ರ ಜನವರಿ 31ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (online application)

Shimoga Nanjappa Hospital

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಮತ್ತು ಶಿವಮೊಗ್ಗ ನಗರ ಆಶ್ರಯ ಸಮಿತಿ ವತಿಯಿಂದ ಜಿ+2 ಮಾದರಿ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಗೋಪಿಶೆಟ್ಟಿಕೊಪ್ಪ ಗ್ರಾಮದ 19.23 ಎಕರೆ ಜಾಗದಲ್ಲಿನ ಮನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

(online application)

ಅರ್ಜಿ ಸಲ್ಲಿಸುವುದು ಹೇಗೆ?

shivamoggacitycorp.org ಜಾಲತಾಣದ Ashraya Yojana Application ಮೆನುವಿನಲ್ಲಿ ಅರ್ಜಿ  ಸಲ್ಲಿಸಬೇಕು. ನವೆಂಬರ್ 5ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದೆ. 2023 ರ ಜನವರಿ 31 ಅರ್ಜಿ ಸಲ್ಲಿಸಲು ಕಡೆಯ ದಿನ. ಫೆಬ್ರವರಿ 07ರಂದು ಬ್ಯಾಂಕ್ ಮೂಲಕ ನಿಗದಿತ ಶುಲ್ಕ ಪಾವತಿಸಲು ಕೊನೆಯ ದಿನವಾಗಿರಲಿದೆ.

(online application)

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

18 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಪುರುಷ ಅಭ್ಯರ್ಥಿಯಾಗಿದ್ದಲ್ಲಿ ಮಾಜಿ ಸೈನಿಕ, ವಿಕಲಚೇತನ, ವಿಧುರ ಹಾಗೂ ಹಿರಿಯ ನಾಗರಿಕ ಆಗಿರಬೇಕು. ಅರ್ಜಿದಾರರು ಶಿವಮೊಗ್ಗ ನಗರ ಪ್ರದೇಶದಲ್ಲಿ ವಾಸವಿರಬೇಕು. ಬಿಪಿಎಲ್ ಅಥವಾ ಅಂತ್ಯೋದಯ ಪಡಿತರ ಚೀಟಿ ಹೊಂದಿರಬೇಕು. ಸ್ವಂತ ನಿವೇಶನ ಹೊಂದಿರಬಾರದು. ಇತ್ತೀಚಿನ ವಾರ್ಷಿಕ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ತೃತೀಯ ಲಿಂಗಿಗಳೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕವೆಷ್ಟು, ಎಷ್ಟು ಹಣ ಪಾವತಿಸಬೇಕು?

ಸಾಮಾನ್ಯ ಪ್ರವರ್ಗ-1, 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅರ್ಜಿದಾರರಿಗೆ ಅರ್ಜಿ ಶುಲ್ಕ 200 ರೂ. ಇಎಂಡಿ 8000 ರೂ. ಒಟ್ಟು 8200 ರೂ., ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರಿಗೆ ಅರ್ಜಿ ಶುಲ್ಕ 100 ರೂ., ಇಎಂಡಿ 5000 ರೂ. ಒಟ್ಟು 5100 ರೂ. ಆಗಿದ್ದು ನಗರದ ಕೆನರಾ ಬ್ಯಾಂಕ್‍ನ ಎಲ್ಲಾ ಶಾಖೆಗಳಲ್ಲಿ / ಬ್ಯಾಂಕ್ ಆಫ್ ಬರೋಡಾದ ಎಸ್‍ಆರ್ ಶಾಖೆಗಳಲ್ಲಿ, ಇಂಡಿಯನ್ ಬ್ಯಾಂಕ್‍ನ ಮಹಾನಗರಪಾಲಿಕೆ ಶಾಖೆ ಹಾಗೂ ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ನಗದು ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.

ಏನೆಲ್ಲ ದಾಖಲೆ ಬೇಕು?

ಅರ್ಜಿದಾರರ ಇತ್ತೀಚಿನ 01 ಪಾಸ್‍ಪೋರ್ಟ್ ಸೈಜಿನ ಕಲರ್ ಭಾವಚಿತ್ರ, ಆಧಾರ್ ಕಾರ್ಡ್, ಬಿಪಿಎಲ್ ಪಡಿತರ ಚೀಟಿ, ಜಾತಿ, ಇತರೆ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ಬ್ಯಾಂಕಿನ ಪಾಸ್ ಪುಸ್ತಕ, ವಾರ್ಷಿಕ ಆದಾಯ ಪ್ರಮಾಣ ಪತ್ರ ಸೇರಿದಂತೆ ಎಲ್ಲ ಮೂಲ ದಾಖಲಾತಿಗಳು ಹಾಗೂ ದಾಖಲಾತಿಗಳ ಸಂಖ್ಯೆಯನ್ನು ಆನ್‍ಲೈನ್ ಅರ್ಜಿ ಸಲ್ಲಿಸುವ ಸಮಯದಲ್ಲಿ ಮೂಲ ದಾಖಲೆಯಲ್ಲಿರುವಂತೆ ಮಾಹಿತಿಯನ್ನು ಸ್ಪಷ್ಟವಾಗಿ ಸಲ್ಲಿಸಬೇಕು ಎಂದು ನಗರ ಆಶ್ರಯ ಸಮಿತಿ ಅಧ್ಯಕ್ಷರು ಹಾಗೂ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಚಂದ್ರು ಕೇಸ್, ವಿನಯ್ ಗುರೂಜಿಯ ವಿಚಾರಣೆ ಸಂಬಂಧ ಶಿವಮೊಗ್ಗದಲ್ಲಿ ಎಡಿಜಿಪಿ ಏನಂದರು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 4, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment