ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021
ಲಾಕ್ ಡೌನ್ ಅವಧಿಯಲ್ಲಿ ಒಂದು ಕೆ.ಜಿ, ಎರಡು ಕೆ.ಜಿ ತರಕಾರಿ ಖರೀದಿ ಮಾಡುವವರಿಗೆ ಎಪಿಎಂಸಿ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೋಲ್ ಸೇಲ್ ಮಾರಾಟಗಾರರು ಮಾತ್ರ ವಿನೋಬನಗರ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಬಹುದು ಎಂದು ತಿಳಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಎಪಿಎಂಸಿ ಮಾರುಕಟ್ಟೆಯಲ್ಲಿ ಚಿಲ್ಲರೆ ವ್ಯಾಪಾರಕ್ಕೆ ಅವಾಶವಿಲ್ಲ. ಸಗಟು ವ್ಯಾಪಾರ ಮಾತ್ರ ಮಾಡಬಹುದು. ಅವರು ತಮ್ಮ ಏರಿಯಾಗಳಿಗೆ ತರಕಾರಿ ಕೊಂಡೊಯ್ದು ಚಿಲ್ಲರೆ ವ್ಯಾಪಾರ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆರು ಕಡೆ ಚಿಲ್ಲರೆ ವ್ಯಾಪಾರ
ಎಪಿಎಂಸಿ ಮಾರುಕಟ್ಟೆ ಮತ್ತು ಇತರೆ ಮಾರುಕಟ್ಟೆಯಲ್ಲಿ ಜನ ಸಂದಣಿ ತಡೆಯುವ ಸಲುವಾಗಿ ಶಿವಮೊಗ್ಗ ನಗರದ ಆರು ಕಡೆ ಚಿಲ್ಲರೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6 ರಿಂದ 10 ಗಂಟೆವರೆಗೆ ಇಲ್ಲಿ ಖರೀದಿಗೆ ಅವಕಾಶವಿದೆ.
ಇದನ್ನೂ ಓದಿ | ಲಾಕ್ ಡೌನ್ ಮುನ್ನಾ ದಿನವೇ 300ಕ್ಕೂ ಹೆಚ್ಚು ವಾಹನ ಸೀಜ್, ಅಮೀರ್ ಅಹಮದ್ ಸರ್ಕಲ್ನಲ್ಲಿ ಭರ್ಜರಿ ಕಾರ್ಯಾಚರಣೆ
ವಿನೋಬನಗರ ಶಿವಾಲಯ ದೇವಸ್ಥಾನದ ಬಳಿ, ಕಾಶೀಪುರ ಕೇಂಬ್ರಿಡ್ಜ್ ಶಾಲೆ ಬಳಿ, ನವುಲೆ ಕ್ರೀಡಾಂಗಣದ ಎದುರು, ಖಾಸಗಿ ಬಸ್ ನಿಲ್ದಾಣದ ಒಳಗೆ, ತುಂಗಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು, ಸೈನ್ಸ್ ಮೈದಾನದಲ್ಲಿ ಚಿಲ್ಲರೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಲಾಕ್ಡೌನ್, ಪೊಲೀಸರಿಗೆ ಪೂರ್ಣ ಜವಾಬ್ದಾರಿ, ರೂಪುರೇಷೆ ರೆಡಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]