ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಂಜೆ 6 ಗಂಟೆವರೆಗೆ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್, ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020

ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನು (ಒಪಿಡಿ) ಬಂದ್ ಮಾಡಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಶಿವಮೊಗ್ಗದಲ್ಲೂ ಬೆಂಬಲ ವ್ಯಕ್ತವಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗಿದೆ.

ಡಿಸೆಂಬರ್ 11ರ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಒಪಿಡಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 668 ಖಾಸಗಿ ಆಸ್ಪತ್ರೆಗಳಿವೆ. ಎಲ್ಲಾ ಆಸ್ಪತ್ರೆಗಳ ಒಪಿಡಿಯನ್ನು 12 ತಾಸು ಬಂದ್ ಆಗಿರಲಿವೆ.

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ವೈದ್ಯರ ಪ್ರತಿಭಟನೆಗೆ ಕಾರಣವೇನು?

  • ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ವಿರೋಧ.
  • ಶಲ್ಯ ಮತ್ತು ಶಲಕ್ಯ ವಿಷಯದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡಿರುವ ಆಯುರ್ವೇದ ವೈದ್ಯರಿಗೆ 39 ಸಾಮಾನ್ಯ ಹಾಗು ಕಿವಿ, ಮೂಗು, ಗಂಟಲು, ಕಣ್ಣು, ಶಿರ ಮತ್ತು ದಂತ ಸಮಸ್ಯೆಗಳಿಗೆ ಶಸ್ತ್ರಚಿಕಿತ್ಸೆ ನಡೆಸಲು ಅನುಮತಿ ನೀಡಲಾಗಿದೆ.

ಆಂಬುಲೆನ್ಸ್ ಸೇವೆ ಎಂದಿನಂತೆ ಇರಲಿದೆ

ಒಪಿಡಿಗಳನ್ನು ಬಂದ್ ಮಾಡಲಾಗಿದೆ. ಆದರೆ ಒಳ ರೋಗಿಗಳಿಗೆ ಎಂದಿನಂತೆ ಚಿಕಿತ್ಸೆ ಮುಂದುವರೆಯಲಿದೆ. 108 ಆಂಬುಲೆನ್ಸ್ ಮತ್ತು ಖಾಸಗಿ ಆಂಬುಲೆನ್ಸ್ ಸೇವೆ ಎಂದಿನಂತೆ ಇರಲಿದೆ. ಮೆಡಿಕಲ್ ಶಾಪ್‍ಗಳು ಕೂಡ ಸಾಮಾನ್ಯ ದಿನದ ಹಾಗೆ ಇರಲಿದೆ.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment