ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020
ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನು (ಒಪಿಡಿ) ಬಂದ್ ಮಾಡಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಶಿವಮೊಗ್ಗದಲ್ಲೂ ಬೆಂಬಲ ವ್ಯಕ್ತವಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಡಿಸೆಂಬರ್ 11ರ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಒಪಿಡಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 668 ಖಾಸಗಿ ಆಸ್ಪತ್ರೆಗಳಿವೆ. ಎಲ್ಲಾ ಆಸ್ಪತ್ರೆಗಳ ಒಪಿಡಿಯನ್ನು 12 ತಾಸು ಬಂದ್ ಆಗಿರಲಿವೆ.
ವೈದ್ಯರ ಪ್ರತಿಭಟನೆಗೆ ಕಾರಣವೇನು?
- ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ವಿರೋಧ.
- ಶಲ್ಯ ಮತ್ತು ಶಲಕ್ಯ ವಿಷಯದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡಿರುವ ಆಯುರ್ವೇದ ವೈದ್ಯರಿಗೆ 39 ಸಾಮಾನ್ಯ ಹಾಗು ಕಿವಿ, ಮೂಗು, ಗಂಟಲು, ಕಣ್ಣು, ಶಿರ ಮತ್ತು ದಂತ ಸಮಸ್ಯೆಗಳಿಗೆ ಶಸ್ತ್ರಚಿಕಿತ್ಸೆ ನಡೆಸಲು ಅನುಮತಿ ನೀಡಲಾಗಿದೆ.
ಆಂಬುಲೆನ್ಸ್ ಸೇವೆ ಎಂದಿನಂತೆ ಇರಲಿದೆ
ಒಪಿಡಿಗಳನ್ನು ಬಂದ್ ಮಾಡಲಾಗಿದೆ. ಆದರೆ ಒಳ ರೋಗಿಗಳಿಗೆ ಎಂದಿನಂತೆ ಚಿಕಿತ್ಸೆ ಮುಂದುವರೆಯಲಿದೆ. 108 ಆಂಬುಲೆನ್ಸ್ ಮತ್ತು ಖಾಸಗಿ ಆಂಬುಲೆನ್ಸ್ ಸೇವೆ ಎಂದಿನಂತೆ ಇರಲಿದೆ. ಮೆಡಿಕಲ್ ಶಾಪ್‍ಗಳು ಕೂಡ ಸಾಮಾನ್ಯ ದಿನದ ಹಾಗೆ ಇರಲಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]