ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪಾಕಿಸ್ತಾನ ವಿರುದ್ಧದ ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಯೋಧ ವಿಜಯ್ ಕುಮಾರ್ ತವರೂರಿಗೆ ಮರಳಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅವರನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು, ನಾಗರಿಕರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ಜಮ್ಮುವಿನಲ್ಲಿ ಭಾರತೀಯ ಸೇನೆಯ ಎಲೆಕ್ಟ್ರಾನಿಕ್ ಮೆಕಾನಿಕ್ ಇಂಜಿನಿಯರಿಂಗ್ ವಿಭಾಗದಲ್ಲಿ ಹವಾಲ್ದಾರ್ ವಿಜಯ್ ಕುಮಾರ್ ಕರ್ತವ್ಯದಲ್ಲಿದ್ದಾರೆ. ಆಪರೇಷನ್ ಸಿಂಧೂರದಲ್ಲಿ ಹವಾಲ್ದಾರ್ ವಿಜಯ ಕುಮಾರ್ ಅವರು ಮುಂಚೂಣಿ ಕಾರ್ಯಾಚರಣೆಯಲ್ಲಿದ್ದರು.

ಪತ್ನಿ ರೇಖಾ, ಪುತ್ರಿಯರಾದ ಸುಷ್ಮಿತಾ ಮತ್ತು ಶಿವನ್ಯಾ ಅವರೊಂದಿಗೆ ಹವಾಲ್ದಾರ್ ವಿಜಯ ಕುಮಾರ್ ಅವರು ಇವತ್ತು ರೈಲಿನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದರು. ರೈಲ್ವೆ ನಿಲ್ದಾಣದಲ್ಲಿ ಯೋಧ ವಿಜಯ ಕುಮಾರ್ ಅವರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು, ಕುಟುಂಬದವರು, ಶಿವಮೊಗ್ಗದ ನಾಗರಿಕರು ಹಾರ ಹಾಕಿ, ಸಿಹಿ ತಿನ್ನಿಸಿ ಸ್ವಾಗತಿಸಿದರು.


ಹವಾಲ್ದಾರ್ ವಿಜಯ್ ಕುಮಾರ್ ಅವರು ಶಿವಮೊಗ್ಗ ಸೀಗೆಹಟ್ಟಿ ನಿವಾಸಿಯಾಗಿದ್ದಾರೆ. ಇವತ್ತು ಅವರನ್ನು ಸ್ವಾಗತಿಸಲು ಕುಟುಂಬದವರು, ಶಾಲೆ, ಕಾಲೇಜು ಅವಧಿಯ ಸಹಪಾಠಿಗಳು ಆಗಮಿಸಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಪ್ರಮುಖರಾದ ಮಧುಸೂದನ್, ಚೇತನ್, ವಿಜಯ್ ಕುಮಾರ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ನೇಮಕ


LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















