SHIMOGA NEWS, 15 OCTOBER 2024 : ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸೈನ್ಸ್ ಪಾರ್ಕ್ (Science Park) ಸ್ಥಾಪನೆಗೆ ಹಳೆಯ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಕಾಲೇಜು ಕ್ಯಾಂಪಸ್ ಅನ್ನು ಶೈಕ್ಷಣಿಕ ಚಟುವಟಿಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳು ಸಂಘದ ಪ್ರಮುಖರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ವಿಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವಿದ್ಯುನ್ಮಾನ ಮಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕೇಂದ್ರ ಯೋಜನೆಯನ್ನು ಸರ್ಕಾರ ಕೈ ಬಿಡಬೇಕು ಎಂದು ಆಗ್ರಹಿಸಿದರು.
![]() |
‘ಯಾರಿಗೂ ತಿಳಿಯದಂತೆ ನೋಡಿಕೊಂಡಿದ್ದಾರೆʼ
ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ಮಾತನಾಡಿ, ಸಹ್ಯಾದ್ರಿ ಕಾಲೇಜಿನ ಜಮೀನಿನಲ್ಲಿ ವಿಜ್ಞಾನ ಕೇಂದ್ರ ಕೆಟಗರಿ 2 ಸ್ಥಾಪಿಸುವ ಯೋಜನೆ ಕೂಡಲೆ ಕೈಬಿಡಬೇಕು. ವಿಜ್ಞಾನ ಕೇಂದ್ರಕ್ಕೆ ಮೊದಲು ನವುಲೆ ಬಳಿ ಜಾಗ ನಿಗದಿಯಾಗಿತ್ತು. ತಜ್ಞರ ಸಮಿತಿ ಆ ಸ್ಥಳ ಸೂಕ್ತವಿಲ್ಲ ಎಂದು ವರದಿ ನೀಡಿತ್ತು. ಆಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲಾಧಿಕಾರಿಯನ್ನು ಒಳಗೊಂಡ ಸಮಿತಿ, ಸಹ್ಯಾದ್ರಿ ಕಾಲೇಜಿನ ಏಳು ಎಕರೆ ಜಮೀನನ್ನು ಗುರುತಿಸಿದೆ. ಈ ವಿಷಯಗಳು ಹೊರ ಬರದಂತೆ ನೋಡಿಕೊಳ್ಳಲಾಗಿದೆ ಎಂದು ಆರೋಪಿಸಿದರು.
2022ರಲ್ಲಿ ರಾಜ್ಯ ಸರಕಾರ ಸಹ್ಯಾದ್ರಿ ಕಾಲೇಜಿಗೆ ಸೇರಿದ 7 ಎಕರೆ ಜಮೀನನ್ನು ರಾಜ್ಯ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಗೆ ವಿಜ್ಞಾನ ಕೇಂದ್ರ ಕೆಟಗರಿ 2 ಸ್ಥಾಪಿಸಲು 30 ವರ್ಷಗಳ ಅವಧಿಗೆ ಗುತ್ತಿಗೆಗೆ ನೀಡಿದೆ. ಈ ಹಿಂದೆ ಕಾಲೇಜಿನ ಜಾಗವನ್ನು ಖೇಲೋ ಇಂಡಿಯಾಗೆ ನೀಡಿದಾಗಲೂ ವಿರೋಧ ವ್ಯಕ್ತಪಡಿಸಿದ್ದೆವು ಎಂದು ತಿಳಿಸಿದರು.
ಯಾರೆಲ್ಲ ಏನೇನು ಹೇಳಿದರು?
ಸಹ್ಯಾದ್ರಿ ಕಾಲೇಜು ದುಷ್ಟಶಕ್ತಿಗಳ ಕೆಂಗಣ್ಣಿಗೆ ಗುರಿಯಾದಂತಿದೆ. ಪ್ರಸ್ತುತ ಖಾಸಗಿ ಕಾಲೇಜುಗಳ ಭರಾಟೆಯಲ್ಲಿ ಸಹ್ಯಾದ್ರಿ ಕಾಲೇಜು ಬಡವರು, ಕೂಲಿಕಾರ್ಮಿಕರ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುತ್ತಿದೆ. ಆದ್ದರಿಂದ, ಇಲ್ಲಿ ಉನ್ನತಮಟ್ಟದ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ. ಸಹ್ಯಾದ್ರಿ ಕಾಲೇಜಿನ 7 ಎಕರೆ ಜಾಗವನ್ನು 30 ವರ್ಷಕ್ಕೆ ಗುತ್ತಿಗೆ ನೀಡಿರುವುದಕ್ಕೆ ಸಂಪೂರ್ಣ ವಿರೋಧವಿದೆ.
– ಆಯನೂರು ಮಂಜುನಾಥ್, ಮಾಜಿ ಸಂಸದ
ಜಮೀನನ್ನು 30 ವರ್ಷಗಳ ಕಾಲ ಗುತ್ತಿಗೆ ನೀಡಲು ಕುವೆಂಪು ವಿವಿಯ ಈ ಹಿಂದಿನ ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ. ಮುಂದಿನ ಸಭೆಯಲ್ಲಿ ಇದನ್ನು ರದ್ದುಗೊಳಿಸುವ ನಿರ್ಣಯ ಕೈಗೊಳ್ಳಲಾಗುವುದು. ಅಗತ್ಯವಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ಕರೆದೊಯ್ಯುತ್ತೇವೆ.
– ಕೆ.ಪಿ.ಶ್ರೀಪಾಲ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ
ಪ್ರಮುಖರಾದ ಎನ್.ಮಂಜುನಾಥ್, ಎಂ.ಗುರುಮೂರ್ತಿ, ಯೋಗೀಶ್, ಶಿವಬಸಪ್ಪ, ಚಂದ್ರಣ್ಣ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200